ಈಗಿನ ಸುದ್ದಿ

ಅಗ್ನಿ-5 ಕ್ಷಿಪಣಿ ಪರೀಕ್ಷಾರ್ಥ ಉಡಾವಣೆ ಯಶಸ್ವಿ

ಅಗ್ನಿ-5 ಕ್ಷಿಪಣಿ ಪರೀಕ್ಷಾರ್ಥ ಉಡಾವಣೆ ಯಶಸ್ವಿ
Published On :

ಬಾಲಸೋರ್(ಒಡಿಶಾ): ಪರಮಾಣು ಸಿಡಿತಲೆಗಳನ್ನು ಹೊತ್ತೊಯ್ಯುವ ಸಾಮರ್ಥ್ಯ ಹೊಂದಿರುವ ಅಗ್ನಿ-5 ಕ್ಷಿಪಣಿಯನ್ನು ಭಾನುವಾರ ಒಡಿಶಾದ ಕರಾವಳಿಯಿಂದ ಯಶಸ್ವಿಯಾಗಿ ಉಡಾಯಿಸಲಾಯಿತು.

ಇಂದು ಬೆಳಿಗ್ಗೆ 8.50ರ ಸುಮಾರಿಗೆ ಒಡಿಶಾದ ಕರಾವಳಿಯಲ್ಲಿರು ಮೂರು ಘಟ್ಟಗಳ ಘನ ಪ್ರೊಪಲ್ಲೆಂಟ್ ಕ್ಷಿಪಣಿಯನ್ನು ಉಡಾವಣೆ ಮಾಡುವ ಸಂಕೀರ್ಣ-4 ಸಂಚಾರಿ ಕೇಂದ್ರದಿಂದ ಎರಡನೇ ಭಾರಿಗೆ ಪರೀಕ್ಷಾರ್ಥವಾಗಿ ಕ್ಷಿಪಣಿಯನ್ನು ಉಡಾವಣೆ ಮಾಡಲಾಯಿತು. ಸುಮಾರು 5 ಸಾವಿರ ಕಿ.ಮೀ ದೂರ ಕ್ರಮಿಸುವ ಸಾಮರ್ಥ್ಯ ಹೊಂದಿರುವ ಸ್ವದೇಶಿ ನಿರ್ಮಿತ ಆಗ್ನಿ-5 ಕ್ಷಿಪಣಿಯನ್ನು ಪರೀಕ್ಷಾರ್ಥವಾಗಿ ಹಾರಿಸಲಾಯಿತು ಎಂದು ರಕ್ಷಣಾ ಮೂಲಗಳಿಂದ ತಿಳಿದುಬಂದಿದೆ.

ಈ ಕ್ಷಿಪಣಿಯು ಒಂದು ಸಾವಿರ ಕೆ.ಜಿ.ಗೂ ಅಧಿಕ ತೂಕದ ಅಣು ಶಸ್ತ್ರಾಸ್ತ್ರಗಳನ್ನು ಹೊತ್ತೊಯ್ಯುವ ಸಾಮರ್ಥ್ಯವನ್ನು ಹೊಂದಿದೆ.  ಇದಕ್ಕೂ ಮುನ್ನ 2012ರಲ್ಲಿ ಒಡಿಶಾದ ಕರಾವಳಿ ತೀರದಲ್ಲಿ ಐದು ಸಾವಿರ ಕಿ.ಮೀ ದೂರ ಕ್ರಮಿಸಬಲ್ಲ ಅಗ್ನಿ-5 ಕ್ಷಿಪಣಿಯ ಮೊದಲ ಹಂತದ ಪ್ರಯೋಗಾರ್ಥ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.