ಈಗಿನ ಸುದ್ದಿ

ಮುಜಾಫರ್‌ನಗರ ಗಲಭೆ ದೊಡ್ಡ ದುರಂತ: ಪ್ರಧಾನಿ

ಮುಜಾಫರ್‌ನಗರ ಗಲಭೆ ದೊಡ್ಡ ದುರಂತ: ಪ್ರಧಾನಿ
Published On :

ಮುಜಾಫರ್‌ನಗರ: 47 ಮಂದಿಯನ್ನು ಬಲಿ ಪಡೆದ ಉತ್ತರ ಪ್ರದೇಶದ ಮುಜಾಫರ್‌ನಗರ ಕೋಮುಗಲಭೆಯ ಬಗ್ಗೆ ತೀವ್ರ ವಿಷಾದ ವ್ಯಕ್ತಪಡಿಸಿರುವ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು, ದಂಗೆಕೋರರನ್ನು ಕಠಿಣ ಶಿಕ್ಷೆಗೆ ಒಳಪಡಿಸುವುದಾಗಿ ಸೋಮವಾರ ಹೇಳಿದ್ದಾರೆ.

ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಒಂದು ವಾರದ ಬಳಿಕ ಇಂದು ಗಲಭೆ ಪೀಡಿತ ಮುಜಾಫರ್‌ನಗರಕ್ಕೆ ಭೇಟಿ ನೀಡಿ, ಪರಿಸ್ಥಿತಿಯ ಬಗ್ಗೆ ಪರಿಶೀಲನೆ ನಡೆಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಧಾನಿ, ಮುಜಾಫರ್‌ನಗರ ಕೋಮುಗಲಭೆ ಒಂದು ದೊಡ್ಡ ದುರಂತ ಎಂದಿದ್ದಾರೆ. ಅಲ್ಲದೆ ಘಟನೆಗೆ ಕಾರಣರಾದವರಿಗೆ ಶಿಕ್ಷೆಯಾಗಬೇಕು ಎಂದು ಹೇಳಿದ್ದಾರೆ.

ರಾಜ್ಯದ ಜನತೆಗೆ ಭದ್ರತೆಯೊದಗಿಸುವುದು ಉತ್ತರ ಪ್ರದೇಶ ಸರ್ಕಾರದ ಕರ್ತವ್ಯ, ಗಲಭೆ ಪೀಡಿತ ಪ್ರದೇಶಗಳಲ್ಲಿ ಶಾಂತಿ ಸ್ಥಾಪಿಸಲು ಬೇಕಾದ ಎಲ್ಲ ರೀತಿಯ ಸಹಕಾರವನ್ನು ಕೇಂದ್ರ ಸರ್ಕಾರ ನೀಡಲಿದೆ ಎಂದು ಪ್ರಧಾನಿ ಭರವಸೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.