ಈಗಿನ ಸುದ್ದಿ

ರಾಜಸ್ಥಾನ ಸಚಿವನ ವಿರುದ್ಧ ರೇಪ್ ಕೇಸ್

ರಾಜಸ್ಥಾನ ಸಚಿವನ ವಿರುದ್ಧ ರೇಪ್ ಕೇಸ್
Published On :

ಜೈಪುರ್: ರಾಜಸ್ಥಾನ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಬಾಬುಲಾಲ್‌ನಗರ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಮಂಗಳವಾರ ಪೊಲೀಸರಿಗೆ ಆದೇಶಿಸಿದೆ.

ತನ್ನ ನಿವಾಸದಲ್ಲೇ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಸಚಿವ ಬಾಬುಲಾಲ್‌ನಗರ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಪೊಲೀಸರಿಗೆ ಜೈಪುರ್ ಕೋರ್ಟ್ ಆದೇಶಿಸಿದೆ. ಕೋರ್ಟ್ ಆದೇಶದ ಮೇರೆಗೆ ಸಚಿವರ ವಿರುದ್ಧ ಪೊಲೀಸರು ಅತ್ಯಾಚಾರ ಪ್ರಕರಣವನ್ನು ದಾಖಲಿಸಿದ್ದಾರೆ.

ಸೆಪ್ಟಂಬರ್ 13ರಂದು ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದ್ದ ಮಹಿಳೆ. ಕೆಲಸ ಕೊಡಿಸುವುದಾಗಿ ಹೇಳಿ ಸಚಿವ ಬಾಬುಲಾಲ್‌ನಗರ್ ಅವರು ಸೆ, 11ರಂದು ಮಧ್ಯಾಹ್ನ ಮನೆಗೆ ಬರುವಂತೆ ಹೇಳಿದರು. ಅದರಂತೆ ನಾನು ಅಲ್ಲಿಗೆ ಹೋದಾಗ ಸಚಿವರು ನನಗೆ ಕುಡಿಯುಂತೆ ಬಲವಂತ ಮಾಡಿದರು. ಅಲ್ಲದೆ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ. ಈ ವಿಚಾರವಾಗಿ ಹೊರಗಡೆ ಯಾರಿಗು ತಿಳಿಸದಂತೆ ಬೆದರಿಕೆ ಹಾಕಿದ್ದರು ಎಂದು ದೂರಿದ್ದಾರೆ.





Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.