ಈಗಿನ ಸುದ್ದಿ

ಎರಡು ವಾರಗಳಲ್ಲಿ ಈರುಳ್ಳಿ ಬೆಲೆ ಕಡಿಮೆಯಾಗಲಿದೆ: ಪವಾರ್

Published On :

ನವದೆಹಲಿ: ಇಳುವರಿ ಕುಸಿತದಿಂದ ಗಗನಕ್ಕೇರಿದ್ದ ಈರುಳ್ಳಿ ಬೆಲೆ ಎರಡು -ಮೂರು ವಾರಗಳಲ್ಲಿ ಕಡಿಮೆಯಾಗಲಿದೆ ಎಂದು ಕೇಂದ್ರ ಕೃಷಿ ಸಚಿವ ಶರದ್ ಪವಾರ್ ಗುರುವಾರ ಹೇಳಿದ್ದಾರೆ.

ಮಹಾರಾಷ್ಟ್ರ ಸೇರಿದಂತೆ ಇತರೆ ರಾಜ್ಯಗಳಲ್ಲಿ ಹೊಸದಾಗಿ ಇಳುವರಿಯಾಗಿದ್ದು, ಇನ್ನೆರಡು ಮೂರು ವಾರಗಳಲ್ಲಿ ಈರುಳ್ಳಿ ಬೆಲೆ ಕಡಿಮೆಯಾಗಲಿದೆ ಎಂದು ಪವಾರ್ ಹೇಳಿದ್ದಾರೆ.

ಉತ್ತಮ ಇಳುವರಿ ಇಲ್ಲದೆ ಈರುಳ್ಳಿ ಮಾರುಕಟ್ಟೆಗೆ ಪೂರೈಕೆ ಆಗುತ್ತಿಲ್ಲವಾದುದರಿಂದ ಈರುಳ್ಳಿ ಬೆಲೆ ಗಗನಕ್ಕೇರಿದೆ. ಇದರಿಂದ ಕಂಗಾಲಾಗಿರುವ ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಂತಾಗಿದೆ.

ಆದರೆ ರೈತರು ಹೊಸದಾಗಿ ಈರುಳ್ಳಿಯನ್ನು ಬೆಳದಿದ್ದು, ಎರಡು -ಮೂರು ವಾರಗಳಲ್ಲಿ ಮಾರಕಟ್ಟೆಗೆ ಬರಲಿದೆ. ಇದರಿಂದ ಈರುಳ್ಳಿ ಬೆಲೆ ಕಡಿಮೆಯಾಗಲಿದೆ ಎಂದು ಪವಾರ್ ಹೇಳಿದ್ದಾರೆ.

ಪ್ರಸ್ತುತ ಈರುಳ್ಳಿ ಬೆಲೆ 70-80 ರುಪಾಯಿಗೆ ತಲುಪಿದ್ದು, ಗ್ರಾಹಕರು ಕಂಗಾಲಾಗಿದ್ದಾರೆ. ಆದರೆ ಇನ್ನೂ ಕೆಲವೇ ದಿನಗಳಲ್ಲಿ ಈರುಳ್ಳಿ ಪೂರೈಕೆ ಹೆಚ್ಚಾಗಲಿದೆ. ಇದರಿಂದ ಬೆಲೆ ಕಡಿಮೆಯಾಗಲಿದೆ ಎಂದು ಪವಾರ ಭರವಸೆ ನೀಡಿದ್ದಾರೆ.

ಈರುಳ್ಳಿ ಪೂರೈಕೆ ಕಡಿಮೆ ಇರುವುದನ್ನೇ ಬಂಡವಾಳವಾಗಿಸಿಕೊಂಡು, ಕೃತಕವಾಗಿ ಈರುಳ್ಳಿ ಬೆಲೆ ಏರಿಸುತ್ತಿರುವ ದಲ್ಲಾಳಿಗಳು ಮತ್ತು ಸಗಟು ವ್ಯಾಪಾರಿಗಳು ಮೇಲೆ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೆ ಸೂಚನೆ ನೀಡಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.