ಬಿಸಿಸಿಐ ಅಧ್ಯಕ್ಷ ಚುನಾವಣೆ: ಶ್ರೀನಿವಾಸನ್ ಸ್ಪರ್ಧೆ
ನವದೆಹಲಿ: ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ತಾತ್ಕಾಲಿಕವಾಗಿ ಹಿಂದೆ ಸರಿದಿರುವ ಶ್ರೀನಿವಾಸ್ನ ಅವರು, ಬಿಸಿಸಿಐ ಅಧ್ಯಕ್ಷ ಸ್ಧಾನ ಉಳಿಸಿಕೊಳ್ಳಲು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ.
ಇಂದು ಸುದ್ಧಿಗಾರೊಂದಿಗೆ ಮಾತನಾಡಿದ ಅವರು, ಮುಂದಿನ ಬಿಸಿಸಿಐ ಅಧ್ಯಕ್ಷ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಅಲ್ಲದೆ ಚುನಾವಣೆಯಲ್ಲಿ ಗೆದ್ದು ಮತ್ತೆ ಅಧಿಕಾರದ ಗದ್ದುಗೆ ಏರುವ ಭರವಸೆ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ, ಬಿಸಿಸಿಐನ ಅಧ್ಯಕ್ಷರಾಗಿ ಎರಡು ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಸೆ. 29ರಂದು ಚೆನ್ನೈನಲ್ಲಿ ವಾರ್ಷಿಕ ಸಭೆ ಕರೆಯುವುದಾಗಿ ಶ್ರೀನಿವಾಸನ್ ಹೇಳಿದ್ದಾರೆ.
ಕೆಲವು ದಿನಗಳ ಹಿಂದೆ ಶಿಸ್ತು ಸಮಿತಿ ಸಭೆ ಕರೆದಿದ್ದ ಶ್ರೀನಿವಾಸನ್ ಅವರು, ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಭಾಗಿಯಾಗಿದ್ದ ರಾಜಸ್ಥಾನ ರಾಯಲ್ಸ್ ತಂಡದ ಆಟಗಾರರಾಗಿದ್ದ ಶ್ರೀಶಾಂತ್ ಮತ್ತು ಅಂಕಿತ್ ಚೌಹಾಣ್ ಅವರ ಮೇಲೆ ಆಜೀವ ನಿಷೇಧ ಹೇರಿದ್ದರು.
ಶ್ರೀನಿವಾಸನ್ ಈ ಚುನಾವಣೆಯಲ್ಲಿ ಗೆಲ್ಲಬೇಕಾದರೆ ಅವರಿಗೆ 31 ಮತಗಳ ಪೈಕಿ 16 ಮತಗಳನ್ನು ಬೇಕಿದೆ. ಇದಕ್ಕಾಗಿ ದಕ್ಷಿಣ ವಲಯದ ಸದಸ್ಯರ ಮೇಲೆ ಕಣ್ಣಿಟ್ಟಿರುವ ಅವರು, ಈ ಸದಸ್ಯರೆಲ್ಲರು ತಮಗೆ ಮತ ನೀಡಿ ಗೆಲ್ಲಿಸುತ್ತಾರೆ ಎಂಬ ಆಶಯ ವ್ಯಕ್ತಪಡಿಸಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್ನ ಆರನೇ ಆವೃತ್ತಿಯಲ್ಲಿ ಶ್ರೀನಿವಾಸನ್ ಅಳಿಯ, ಚೆನ್ನೈ ಸೂಪರ್ ಕಿಂಗ್ಸ್ನ ಮುಖ್ಯಸ್ಥ ಗುರುನಾಥ್ ಮೇಯಪ್ಪನ್ ಸ್ಪಾಟ್ ಫೀಕ್ಸಿಂಗ್ ಪ್ರಕರಣದಲ್ಲಿ ಭಾಗಿಯಾದ ಆರೋಪ ಸಂಬಂಧ ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು ಮೇಯಪ್ಪನನ್ನು ಬಂಧಿಸಿದ್ದರು. ಈ ಸಂಬಂಧ ಬಿಸಿಸಿಐ ಅಧ್ಯಕ್ಷರಾಗಿದ್ದ ಶ್ರೀನಿವಾಸನ್ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಬಿಸಿಸಿಐ ಕಾರ್ಯಕಾರಣಿ ಸಮಿತಿಯಲ್ಲಿ ಒತ್ತಡ ಹೆಚ್ಚಾಗಿದ್ದರಿಂದ ಅವರು ಅಧ್ಯಕ್ಷ ಸ್ಥಾನದಿಂದ ತಾತ್ಕಾಲಿಕವಾಗಿ ಹಿಂದೆ ಸರಿದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

