ಈಗಿನ ಸುದ್ದಿ

ಹಿರೇಮಠ್ ಆರೋಪ ಅಸಂಬದ್ಧ, ಲಾಡ್‌ 'ಕೈ' ಬಿಡಲ್ಲ: ಸಿಎಂ

ಹಿರೇಮಠ್ ಆರೋಪ ಅಸಂಬದ್ಧ, ಲಾಡ್‌ 'ಕೈ' ಬಿಡಲ್ಲ: ಸಿಎಂ
Published On :

ಬಾಗಲಕೋಟೆ: ಸಚಿವ ಸಂತೋಷ್ ಲಾಡ್ ಅವರನ್ನು ಸಂಪುಟದಿಂದ ಕೈ ಬಿಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಸ್ಪಷ್ಟಪಡಿಸಿದ್ದಾರೆ.

ನಿನ್ನೆಯಷ್ಟೆ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ್ ಅವರು, ಅಕ್ರಮ ಗಣಿಗಾರಿಕೆ ಆರೋಪದ ಹಿನ್ನೆಲೆಯಲ್ಲಿ ಸಂತೋಷ್ ಲಾಡ್ ಅವರು ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿದ್ದರು. ಅಲ್ಲದೆ ಸಂತೋಷ್ ಲಾಡ್ ಅವರು ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿರುವ ವಿ.ಎಸ್.ಲಾಡ್ ಆಂಡ್ ಸನ್ಸ್ ಕಂಪನಿಯ ಪಾಲುದಾರರಾಗಿದ್ದು, ಈ ಬಗ್ಗೆ ಲೋಕಾಯುಕ್ತ ವರದಿಯಲ್ಲಿ ಉಲ್ಲೇಖ ಮಾಡಿರುವ ಬಗ್ಗೆ ಹಿರೇಮಠ್ ಅವರು ದಾಖಲೆ ಬಿಡುಗಡೆ ಮಾಡಿದ್ದರು.

ಈ ಬಗ್ಗೆ ಇಂದು ಕೂಡಲಸಂಗಮದಲ್ಲಿ ಪ್ರತಿಕ್ರಿಯಿಸಿದ ಸಿಎಂ, ಹಿರೇಮಠ್ ಅವರ ಆರೋಪ ಅಸಂಬದ್ಧ, ಅವರು ಬಿಡುಗಡೆ ಮಾಡಿರುವ ದಾಖಲೆಗೂ ಮತ್ತು ಸಂತೋಷ್ ಲಾಡ್‌ಗೂ ಸಂಬಂಧವಿಲ್ಲ ಎಂದು ತಮ್ಮ ಸಂಪುಟ ಸಹದ್ಯೋಗಿಯನ್ನು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ.

ಇದೇ ವೇಳೆ, ಬಿಜೆಪಿ ಪ್ರಧಾನಿ ಅಭ್ಯರ್ಥಿ ಹಾಗೂ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ಮೋದಿಯನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಿದ್ದು ಜನತೆಯಲ್ಲ. ಕೋಮುವಾದಿ ಮೋದಿಯನ್ನು ಮತದಾರರು ಬೆಂಬಲಿಸುವುದಿಲ್ಲ ಎಂದರು.

ಇನ್ನು ಕಾಂಗ್ರೆಸ್ ಸಹವಾಸ ಮಾಡಿ ಕೆಟ್ಟೆ ಎಂಬ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ, ಕಾಂಗ್ರೆಸ್ ಸಹಕಾರದಿಂದಲೇ ದೇವೇಗೌಡ ಪ್ರಧಾನಿಯಾಗಿದ್ದು, ಆದರೆ ಕಾಂಗ್ರೆಸ್‌ನಿಂದ ಕೆಟ್ಟೆನೆಂದು ಹೇಳಿಕೆ ನೀಡಿರುವುದು ದುರದೃಷ್ಟಕರ ಎಂದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.