ಓಪನ್‌ಬ್ಯಾಡ್ಮಿಂಟನ್: ಕ್ವಾರ್ಟರ್ ಫೈನಲ್ ಗೆ ಭಾರತೀಯ ಆಟಗಾರರು
ಟೋಕಿಯೊ: ಜಪಾನ್ ಓಪನ್‌ಬ್ಯಾಡ್ಮಿಂಟನ್ ಸೂಪರ್ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಎಚ್. ಎಸ್. ಪ್ರಣೋಯ್, ಕೆ.ಶ್ರೀಕಾಂತ್ ಹಾಗೂ ಅಜಯ್ ಜಯರಾಮ್ ಅವರು ಗುರುವಾರ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.
ಓಪನ್ ಬ್ಯಾಡ್ಮಿಂಟನ್ ಸೂಪರ್ ಸರಣಿಯ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಎದುರಾಳಿ ಆರನೇ ವಿಶ್ವ ರ್ಯಾಂಕಿಂಗ್‌ನಲ್ಲಿರುವ ಡೆನ್ಮಾಕ್‌ನ ಜಾನ್ ಒ ಜೊರ್ಗೆನ್‌ಸನ್ ವಿರುದ್ಧ 21-14,13-21,21-17 ನೇರ ಸೆಟ್‌ಗಳ ಮೂಲಕ ಜಯಗಳಿಸಿದ್ದಾರೆ.
ಇನ್ನೊಂದೆಡೆ ಜಯರಾಮ್ ಅವರು ತಮ್ಮ ಎದುರಾಳಿ ಆಟಗಾರ ಯುಚಿ ಇಕೆದಾ ವಿರುದ್ಧ 21-13, 11-21,21-18 ನೇರ ಸೆಟ್‌ಗಳ ಮೂಲಕ ಜಯ ಗಳಿಸಿದರು.
ಥಾಯ್ಲೆಂಡ್ ಗ್ರ್ಯಾಂಡ್ ಪ್ರಿಕ್ಸ್ ಗೋಲ್ಡ್ ಗೆದ್ದಿರುವ ಶ್ರೀಕಾಂತ್ ಅವರು, ಕುಜುತೆರಾ ಕೊಜೈ ಅವರನ್ನು 21-12,21-16 ನೇರ ಸೆಟ್‌ಗಳಿಂದ ಪರಾಭವಗೊಳಿಸಿದರು. ಕ್ವಾರ್ಟರ್ ಫೈನಲ್‌ನಲ್ಲಿ ಶ್ರೀಕಾಂತ್, ಐದನೇ ವಿಶ್ವ ರ್ಯಾಂಕಿಂಗ್‌ನಲ್ಲಿರುವ ಜಪಾನ್‌ನ ಕೆನಿಚಿ ಟಾಗೊ ಅವರನ್ನು ಎದುರಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

