ಅಕ್ರಮ ಆಸ್ತಿ: ಮುಲಾಯಂಗೆ ಸಿಬಿಐ ಕ್ಲೀನ್ಚಿಟ್

ನವದೆಹಲಿ: ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಹಾಗೂ ಅವರ ಪುತ್ರ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ವಿರುದ್ಧದ ಅಕ್ರಮ ಆಸ್ತಿ ಪ್ರಕರಣಕ್ಕೆ ಸಿಬಿಐ ಅಂತ್ಯ ಹಾಡಿದ್ದು, ಅವರ ವಿರುದ್ಧ ಸೂಕ್ತ ಸಾಕ್ಷ್ಯಧಾರಗಳ ಲಭ್ಯವಾಗದ ಕಾರಣ ಶುಕ್ರವಾರ ಕ್ಲೀನ್ಚಿಟ್ ನೀಡಿದೆ.
ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಮುಲಾಯಂ ಸಿಂಗ್ ಹಾಗೂ ಅಖಿಲೇಶ್ ಯಾದವ್ ವಿರುದ್ಧ ತನಿಖೆ ನಡೆಸಿದ ಸಿಬಿಐ, ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ಸಾಕ್ಷ್ಯಾಧಾರಗಳು ಸಿಗದೇ ಇದದ್ದರಿಂದ ಪ್ರಕರಣವನ್ನು ಮುಕ್ತಾಯಗೊಳಿಸಿರುವುದಾಗಿ ಸಿಬಿಐ ತಿಳಿಸಿದೆ.
ಮುಲಾಯಂ ಸಿಂಗ್ ಅವರು ಆದಾಯ ಮೀರಿದ ಅಕ್ರಮ ಆಸ್ತಿಗಳಿಸಿದ್ದಾರೆ ಎಂದು ಆರೋಪಿಸಿ ವಿಶ್ವನಾಥ್ ಚರ್ತುವೇದಿ ಎಂಬುವರು 2007ರಲ್ಲಿ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ತನಿಖೆ ನಡೆಸಿ ವರದಿ ನೀಡುವಂತೆ ಕೋರ್ಟ್ ಸಿಬಿಐಗೆ ಸೂಚಿಸಿತ್ತು. ಪ್ರಕರಣದ ತನಿಖೆ ನಡೆಸಿದ ಸಿಬಿಐ ಸೂಕ್ತ ಆಧಾರಗಳು ಲಭ್ಯವಾಗದ ಕಾರಣ ಪ್ರಕರಣವನ್ನು ಇಲ್ಲಿಗೆ ಕೈಬಿಡಲಾಗುತ್ತಿದೆ ಎಂದು ಹೇಳಿದೆ.
1993 ರಿಂದ 2005ರವರೆಗೆ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಮುಲಾಯಂ ಸಿಂಗ್ ಯಾದವ್ ಅವರು ಆದಾಯ ಮೀರಿದ ಅಕ್ರಮ ಆಸ್ತಿಗಳಿಸಿದ್ದಾರೆ ಎಂದು ಆರೋಪಿಸಿ ವಿಶ್ವನಾಥ್ ಎಂಬುವರು 2007ರಲ್ಲಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಸಂಬಂಧ ತನಿಖೆ ನಡೆಸುವಂತೆ ಸಿಬಿಐಗೆ ಆದೇಶಿಸಿತ್ತು.
ತನಿಖೆ ಕೈಗೊಂಡಿದ್ದ ಸಿಬಿಐ ಮುಲಾಯಂ ಅವರ ಆಸ್ತಿ ವಿವರಗಳನ್ನು ಕೂಲಂಕುಶವಾಗಿ ಪರಿಶೀಲಿಸಿತ್ತು. ಆದರೆ ಅಕ್ರಮ ಆಸ್ತಿಗಳಿಕೆ ಮಾಡಿದ್ದಾರೆ ಎಂಬುದಕ್ಕೆ ಯಾವುದೇ ಪ್ರಮುಖ ಆಧಾರಗಳು ಸಿಗದೆ ಇದದ್ದರಿಂದ ಸಿಬಿಐ ಪ್ರಕರಣವನ್ನು ಇಲ್ಲಿಗೆ ಕೈಬಿಟ್ಟಿದೆ. ಇದರೊಂದಿಗೆ ಮುಲಾಯಂ ಸಿಂಗ್ ಯಾದವ್ ಹಾಗೂ ಅವರ ಪುತ್ರ ಅಖಿಲೇಶ್ ಯಾದವ್ ಅವರ ಮೇಲಿದ್ದ ಅಕ್ರಮ ಆಸ್ತಿ ಆರೋಪದಿಂದ ಮುಕ್ತರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


