ಹಣದುಬ್ಬರ ನಿಯಂತ್ರಣಕ್ಕಾಗಿ ರೆಪೊ ದರ ಹೆಚ್ಚಿಸಿದ ಆರ್ಬಿಐ

ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ ಶುಕ್ರವಾರ ತನ್ನ ತ್ರೈಮಾಸಿಕ ಹಣಕಾಸು ನೀತಿಯನ್ನು ಪ್ರಕಟಿಸಿದ್ದು, ರೆಪೊ ದರವನ್ನು ಶೇ.0.25ರಷ್ಟು ಹೆಚ್ಚಿಸಿದೆ. ಆದರೆ ನಗದು ಮೀಸಲು ಅನುಪಾತ(ಸಿಆರ್ಆರ್)ದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ರೆಪೊ ದರವನ್ನು ಶೇ.7.25ರಿಂದ ಶೇ.7.5ಕ್ಕೆ ಏರಿಕೆ ಮಾಡಲಾಗಿದೆ. ರೆಪೊ ದರ ಹೆಚ್ಚಳದಿಂದ ಇಎಂಐ ಮೊತ್ತ ಹೆಚ್ಚಳವಾಗಲಿದ್ದು, ಇನ್ನುಮುಂದೆ ಮನೆ ಮತ್ತು ಕಾರು ಸಾಲ ಮತ್ತಷ್ಚು ದುಬಾರಿಯಾಗಲಿದೆ. ಅಲ್ಲದೆ ಷೇರು ಮಾರುಕಟ್ಟೆಯಲ್ಲಿ ಭಾರಿ ತಲ್ಲಣ ಉಂಟು ಮಾಡಿದ್ದು, ಸೆನ್ಸೆಕ್ಸ್ 500 ಅಂಕಗಳಷ್ಟು ಮತ್ತು ನಿಫ್ಟಿ 160 ಅಂಕಗಳಷ್ಟು ಕುಸಿತ ಕಂಡಿದೆ.
ಇನ್ನು ಈ ಬಗ್ಗೆ ಮುಂಬೈನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಆರ್ಬಿಐ ಗವರ್ನರ್ ರಘುರಾಮ್ ರಾಜನ್ ಅವರು, ಹಣದುಬ್ಬರ ನಿಯಂತ್ರಣಕ್ಕಾಗಿ ರೆಪೊ ದರವನ್ನು ಹೆಚ್ಚಿಸಲಾಗಿದೆ ಮತ್ತು ರುಪಾಯಿ ಮೌಲ್ಯ ವೃದ್ಧಿಗೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


