ಈಗಿನ ಸುದ್ದಿ

ಅಸಾರಾಂ ಬಾಪು 2 ಸಹಾಯಕರು ಕೋರ್ಟ್‌ಗೆ ಶರಣು

Published On :

ಜೊಧ್‌ಪುರ: ವಿವಾದಿತ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪು ಅವರ ಇಬ್ಬರು ಸಹಾಯಕರು ಶುಕ್ರವಾರ ಜೊಧ್‌ಪುರ ಸೆಷನ್ಸ್ ಕೋರ್ಟ್ ಮುಂದೆ ಶರಣಾಗಿದ್ದಾರೆ.

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡದ ಆರೋಪದ ಮೇಲೆ ಜೈಲು ಸೇರಿರುವ ಅಸಾರಾಂ ಬಾಪುವಿಗೆ ಸಹಕರಿಸಿದ್ದ ಆತನ ಇಬ್ಬರು ಸಹಾಯಕರಾದ ಪ್ರಕಾಶ ಹಾಗೂ ಶರತ್ ಎಂಬುವರು ಇಂದು ಕೋರ್ಟ್‌ಗೆ ಶರಣಾಗಿದ್ದಾರೆ.

ಅಸಾರಾಂ ಬಾಪು ಆಶ್ರಮದಲ್ಲಿ ಅಡುಗೆ ಭಟ್ಟನಾಗಿ ಕೆಲಸ ಮಾಡಿಕೊಂಡಿದ್ದ ಪ್ರಕಾಶ, ಬಾಪುವಿನ ಊಟೋಪಚಾರಗಳ ವ್ಯವಸ್ಥೆ ನೋಡಿಕೊಳ್ಳುತ್ತಿದ್ದ. ಮತ್ತೊಬ್ಬ ಆರೋಪಿ ಶರತ್ ಬಾಪುವಿನ ಆಪ್ತ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗಿದೆ.

ಅಸಾರಾಂ ಬಾಪು ಅವರ ಲೈಂಗಿಕ ಕಿರುಕುಳ ಪ್ರಕರಣ ಬಹಿರಂಗಗೊಳ್ಳುತ್ತಿದ್ದಂತೆ ಈ ಇಬ್ಬರು ಆರೋಪಿಗಳು ತಲೆ ಮರೆಸಿಕೊಂಡಿದ್ದರು. ಹೀಗಾಗಿ ಈ ಇಬ್ಬರು ಆರೋಪಿಗಳ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದರು.

ವಿವಾದಿತ ದೇವಮಾನವ ಅಸಾರಾಂ ಬಾಪು 16 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆ. 1ರಂದು ಇಂದೊರ್‌ನಲ್ಲಿ ಪೊಲೀಸರು ಬಂಧಿಸಿದ್ದರು. ಜಾಮೀನು ಕೋರಿ ಬಾಪು ರಾಜಸ್ಥಾನ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಕಳೆದ ಬುಧವಾರ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ತೀರ್ಪನ್ನು ಅ. 1ಕ್ಕೆ ಕಾಯ್ದಿರಿಸಿದೆ. ಅಸಾರಾಂ ಬಾಪು ವಿರುದ್ಧ ಸೆಕ್ಷನ್ 376, 342, 506 ಮತ್ತು ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳ ನಿಗ್ರಹ ಕಾಯಿದೆ(ಪಿಒಸಿಎಸ್‌ಒ) ಸೆಕ್ಷನ್ 8ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.