ವಯಸ್ಸು ದಾಖಲೆಯಾಗಿ ಶಾಲಾ ಪ್ರಮಾಣ ಪತ್ರ ಪರಿಗಣಿಸಿ: ಸುಪ್ರೀಂ
ನವದೆಹಲಿ: ಒಬ್ಬ ವ್ಯಕ್ತಿ ತನ್ನ ವಯಸ್ಸಿನ ದಾಖಲೆಗಾಗಿ ಶಾಲೆ ಬಿಡುಗಡೆ ಪ್ರಮಾಣ ಪತ್ರ ಸಲ್ಲಿಸಿದರೆ ಅದನ್ನು ಪರಿಗಣಿಸಿ ಎಂದು ಸುಪ್ರೀಂ ಕೋರ್ಟ್ ಶನಿವಾರ ಹೇಳಿದೆ.
ನ್ಯಾಯಮೂರ್ತಿಗಳಾದ ಕೆ.ಎಸ್ ರಾಧ್ಯಕೃಷ್ಣನ್ ಮತ್ತು ಎ.ಕೆ ಸಿಕ್ರಿ ಅವರನ್ನೋಳಗೊಂಡ ನ್ಯಾಯಾಪೀಠ ಈ ಆದೇಶ ಹೊರಡಿಸಿದೆ.
ಪ್ರತಿದಿನ ವಯಸ್ಸಿಗೆ ಸಂಬಂಧಪಟ್ಟಂತ ದಾಖಲೆಗಳಲ್ಲಿ ದೋಷವಿರುವುದು ಹಾಗೂ ತಮ್ಮ ವಯಸ್ಸು ದೃಢಪಡಿಸಲು ವೈದ್ಯಕೀಯ ಪ್ರಮಾಣ ಪತ್ರ ಬೇಕೆ ಬೇಕು ಎಂದು ಹೇಳಿ ಅರ್ಜಿಯನ್ನು ತಿರಸ್ಕರಿಸುವುದು ಸೇರಿದಂತೆ ಇತರೆ ಪ್ರಕರಣಗಳು ಪ್ರತಿದಿನ ಕೋರ್ಟ್ ಮೆಟ್ಟಿಲೇರುತ್ತಿವೆ.
ಇದರಿಂದಾಗಿ ಜನರು ಹೆಚ್ಚಾಗಿ ಕೋರ್ಟ್ ಆವರಣದಲ್ಲಿರಬೇಕಾದ ಪರಿಸ್ಥಿತಿ ಎದುರಾಗಿದೆ. ಈ ಹಿನ್ನಲೆಯಲ್ಲಿ ಇಂದು ಸುಪ್ರೀಂ ಕೋರ್ಟ್ ಶಾಲೆಯಲ್ಲಿ ನೀಡುವ ಬಿಡುಗಡೆ ಪ್ರಮಾಣ ಪತ್ರವನ್ನು ವಯಸ್ಸಿನ ದಾಖಲೆಯನ್ನಾಗಿ ಪರಿಗಣಿಸಿ ಎಂದು ಸರ್ಕಾರಗಳಿಗೆ ಸೂಚಿಸಿದೆ.
ಬಾಲಪರಾಧಿಗಳ ವಯಸ್ಸು ನಿಖರವಾಗಿ ತಿಳಿಯಲು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಬೇಕಾಗುತ್ತದೆ. ಇದರಿಂದ ಅನೇಕ ಪ್ರಕರಣಗಳ ವಿಚಾರಣೆ ವಿಳಂಬವಾಗುತ್ತಿರುವ ಹಿನ್ನಲೆಯಲ್ಲಿ ನ್ಯಾಯಾಮೂರ್ತಿಗಳು ಈ ಆದೇಶ ಹೊರಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

