ಯುಪಿಎ ಸರ್ಕಾರವನ್ನು ಕಿತ್ತೋಗೆದು ಬಿಜೆಪಿಯನ್ನು ಅಧಿಕಾರಕ್ಕೆ ತನ್ನಿ: ಮೋದಿ
ಅಹಮದಾಬಾದ್: ಮಾಜಿ ಪ್ರಧಾನಿ ಅಟಲಿ ಬಿಹಾರಿ ವಾಜಪೇಯಿ ಅಧಿಕಾರವಧಿಯೂ 'ದೇಶದ ಅಭಿವೃದ್ಧಿಯ ಸುವರ್ಣಯುಗ' ಅಂತ ಆಡಳಿತ ನೀಡಿದ ಬಿಜೆಪಿಯನ್ನು ಪುನಃ ಅಧಿಕಾರಕ್ಕೆ ತರುವ ಅಗತ್ಯವಿದೆ ಎಂದು ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಭಾನುವಾರ ಅಭಿಪ್ರಾಯಪಟ್ಟಿದ್ದಾರೆ.
ಅನಿವಾಸಿ ಭಾರತೀಯರನ್ನುದ್ದೇಶಿಸಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಅವರು, ಯುಪಿಎ ಸರ್ಕಾರದ ಕಾರ್ಯವೈಖರಿ ಬಗ್ಗೆ ಕಿಡಿಕಾರಿದರು. ದೇಶದ ಅಭಿವೃದ್ದಿಗಾಗಿ ಭಾರತೀಯ ಜನತಾ ಪಕ್ಷ ಅವಿರತವಾಗಿ ದುಡಿಯುತ್ತಿದೆ. ವಾಜಪೇಯಿ ಅಧಿಕಾರವಧಿಯೂ 'ದೇಶದ ಅಭಿವೃದ್ಧಿಯ ಸುವರ್ಣಯುಗ' ಹೀಗಾಗಿ ದೇಶ ಅಭಿವೃದ್ದಿ ಕಾಣಬೇಕಾದರೆ ಕಾಂಗ್ರೆಸನ್ನು ಅಧಿಕಾರದಿಂದ ಕೆಳಗಿಳಿಸಿ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕಿದೆ ಎಂದು ಹೇಳಿದರು.
ಇದೇ ವೇಳೆ, ನಿನ್ನೆ ರಾತ್ರಿ ನೈರೋಬಿಯ ಶಾಪಿಂಗ್ ಮಾಲ್ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಅರ್ಪಿಸಿದರು. ಅಲ್ಲದೆ ಭಯೋತ್ಪಾದನೆ ವಿರುದ್ಧ ವಿಶ್ವದ ಎಲ್ಲಾ ರಾಷ್ಟ್ರಗಳು ಒಗ್ಗಟ್ಟಾಗಿ ಹೋರಾಡಬೇಕು ಎಂದು ಕರೆ ನೀಡಿದರು. ಭಯೋತ್ಪಾದನೆ ಭಾರತವನ್ನು ಹಿನ್ನಿಲ್ಲದಂತೆ ಕಿತ್ತು ತಿನ್ನುತ್ತೀದೆ. ಆದರೂ ಭಯೋತ್ಪಾದನೆ ಸಮಸ್ಯೆಯನ್ನು ಹತ್ತಿಕ್ಕಲು ಯುಪಿಎಗೆ ಸಾಧ್ಯವಾಗುತ್ತಿಲ್ಲ. ಆದರೆ ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತೋಗೆಯುವ ಧ್ಯೇಯ ಬಿಜೆಪಿ ಹೊಂದಿದೆ ಎಂದು ಮೋದಿ ಹೇಳಿದ್ದಾರೆ.
ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮೋದಿ ಭಾಷಣ ಅಟಲ್ ಬಿಹಾರಿ ವಾಜಪೇಯಿ ಅವರ ಆಡಳಿತವನ್ನು ನೆನಪಿಸಿಕೊಂಡರು. ವಾಜಪೇಯಿ ಪ್ರಧಾನಿಯಾಗಿದ್ದಾಗ ದೇಶದ ಸರ್ವತೋಮುಖ ಅಭಿವೃದ್ಧಿಯಗೆ ಶ್ರಮಿಸಿದ್ದರು. ಈ ಅಧಿಕಾಯವದಿಯು ಹಲವಾರು ಅಭಿವೃದ್ದಿಗೆ ಕಾರಣವಾಗಿದೆ. ಹೀಗಾಗಿ ವಾಜಪೇಯಿ ಅವರ ಕಾಲವನ್ನು ದೇಶದ ಸುವರ್ಣಯುಗ ಎಂದು ಕರೆಯಬಹುದಾಗಿದೆ ಎಂದರು. ಎನ್‌ಡಿಎ ಸರಕಾರ ಅನಿವಾಸಿ ಭಾರತೀಯರಿಗೆ ಅನುಕೂಲವಾಗಲು ಜಾರಿಗೆ ತಂದ ಯೋಜನೆಗಳ ಕುರಿತು ಅವರು ಮಾತನಾಡಿದರು. ಮೋದಿ ಅವರ ಭಾಷಣವನ್ನು ತಂಪ ಫ್ಲೋರಿಡಾದಲ್ಲಿರುವ ಜಿಜೆಪಿಯ ರಾಷ್ಟ್ರೀಯ ಘಟಕದಲ್ಲಿ ನೇರ ಪ್ರಸಾರ ಏರ್ಪಡಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

