ಶರದ್‌ಯಾದವ್ ಭೇಟಿ ಮಾಡಿದ ಚಂದ್ರಬಾಬು ನಾಯ್ಡು
ನವದೆಹಲಿ: ಜನತಾ ದಳ(ಸಂಯುಕ್ತ) ಅಧ್ಯಕ್ಷ ಶರದ್ ಯಾದವ್ ಅವರನ್ನು ತೆಲಗು ದೇಶಂ ಪಕ್ಷದ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರು ಭಾನುವಾರ ಭೇಟಿ ಮಾಡಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆ ಸಂಬಂಧ ಮಾತಕತೆ ನಡೆಸಲು ಭೇಟಿ ಮಾಡಲಾಗಿದೆ ಎಂದು ಮೂಲಗಳ ತಿಳಿಸಿವೆ.
ಕಾಂಗ್ರೆಸ್ ಮತ್ತು ಭಾರತೀಯ ಜನತಾ ಪಕ್ಷ(ಬಿಜೆಪಿ) ಹೊರತು ಪಡಿಸಿ ಉಳಿದಂತಹ ಎಲ್ಲಾ ಪಕ್ಷಗಳನ್ನು ಒಟ್ಟುಗೂಡಿಸಿ ಅಕ್ಟೋಬರ್‌ನಲ್ಲಿ ರಾಷ್ಟೀಯ ಸಭೆ ನಡೆಸಲು ಶರದ್ ಯಾದವ್ ನಿರ್ಧರಿಸಿದ್ದಾರೆ. ಈ ಸಂಬಂಧ ಇಂದು ಚಂದ್ರಬಾಬು ನಾಯ್ಡು ಅವರೊಂದಿಗೆ ಮಾತಕತೆ ನಡೆಸಿದ್ದಾರೆ.
2014ರಲ್ಲಿ ನಡೆಯುವ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಬಿಜೆಪಿ ಮತ್ತು ಕಾಂಗ್ರೆಸ್ ಹೊರತು ಪಡಿಸಿ ಇತರೆ ಎಲ್ಲಾ ಪಕ್ಷಗಳ ನಿಲುವು ತಿಳಿದುಕೊಳ್ಳವ ಉದ್ದೇಶದಿಂದ ಮುಂದಿನ ತಿಂಗಳು ರಾಷ್ಟ್ರೀಯ ಸಭೆ ನಡೆಸಲು ನಿರ್ಧರಿಸಿಲಾಗದೆ ಎಂದು ಮೂಲಗಳು ತಿಳಿಸಿವೆ.
ಗುಜರಾತ್ರ ಮುಖ್ಯಮಂತ್ರಿ ನರೇಂದ್ರ ಮೋದಿ ಮುಂಬರುವ ಲೋಕಸಭಾ ಚುನಾವಣೆ ಪ್ರಚಾರ ಸಮಿತಿ ಉಸ್ತುವಾರಿ ವಹಿಸಿದ ಹಿನ್ನಲೆಯಲ್ಲಿ ಜೆಡಿಯು ಎನ್‌ಡಿಎ ಜೊತೆಗಿನ ತನ್ನ 17 ವರ್ಷದ ಸಂಬಂಧಕ್ಕೆ ಗುಡ್ ಬೈ ಹೇಳಿ ಹೊರ ಬಂದಿತ್ತು. ಇದರ ಬೆನ್ನಲ್ಲೇ ದೇಶದಲ್ಲಿರುವ ಇತರೆ ಪಕ್ಷಗಳೊಂದಿಗೆ ಮಾತಕತೆ ನಡೆಸುತ್ತಿರುವುದು ಬಿಜೆಪಿ ವಿರುದ್ಧ ಹುನ್ನಾರ ನಡೆಸುತ್ತಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

