ಈಗಿನ ಸುದ್ದಿ

ಎಲ್ಲದಕ್ಕೂ 'ಆಧಾರ್‌' ಬೇಡ: ಸುಪ್ರೀಂ ಸೂಚನೆ

ಎಲ್ಲದಕ್ಕೂ 'ಆಧಾರ್‌'  ಬೇಡ: ಸುಪ್ರೀಂ ಸೂಚನೆ
Published On :

ನವದೆಹಲಿ: 'ಆಧಾರ್‌' ಕಾರ್ಡ್‌ನಲ್ಲಿ ಹಲವು ನ್ಯೂನತೆಗಳಿದ್ದು, ಅದನ್ನು ಎಲ್ಲದಕ್ಕೂ ಕಡ್ಡಾಯಗೊಳಿಸುವುದು ಬೇಡ ಎಂದು ಸೋಮವರಾ ಸುಪ್ರೀಂ ಕೋರ್ಟ್ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.

ಹಲವು ಲೋಪದೋಷಗಳು ಇರುವ ಹಿನ್ನೆಲೆಯಲ್ಲಿ ಆಧಾರ್ ಯೋಜನೆಯನ್ನು ಸ್ಥಗಿತಗೊಳಿಸಬೇಕು ಎಂದು ಕೋರಿ ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಕೆ.ಎಸ್.ಪುಟ್ಟಸ್ವಾಮಿ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ(ಪಿಐಎಲ್) ವಿಚಾರಣೆ ನಡೆಸಿದ ನ್ಯಾ.ಬಿ.ಎಸ್.ಚೌವ್ಹಾಣ್ ಹಾಗೂ ನ್ಯಾ.ಎಸ್.ಎ ಬೊಂಬ್ಡೆ ಅವರನ್ನೊಳಗೊಂಡ ಸುಪ್ರೀಂ ಪೀಠ, ಎಲ್‌ಪಿಜಿ ಅಡುಗೆ ಅನಿಲ ಸಂಪರ್ಕ ಪಡೆಯುವುದಕ್ಕೆ ಆಧಾರ್ ಕಾರ್ಡ್ ಕಡ್ಡಾಯ ಮಾಡಬೇಡಿ. ಆಧಾರ್ ಕಾರ್ಡ್ ಯೋಜನೆ ಸ್ವಯಂಪ್ರೇರಿತ ಸೇವೆಯಾಗಿರಬೇಕು. ಅದನ್ನು ಜನ ಬೇಕು ಅಂದ್ರೆ ಮಾಡಿಸಿಕೊಳ್ಳುತ್ತಾರೆ. ಅದು ಬಿಟ್ಟು ನಿಮ್ಮಿಷ್ಟಾನುಸಾರ ಕಡ್ಡಾಯಗೊಳಿಸಬೇಡಿ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದೆ.

ಗ್ಯಾಸ್ ಸಬ್ಸಿಡಿ ಸೇರಿದಂತೆ ಇತರೆ ಸರ್ಕಾರಿ ಸೌಲಭ್ಯ ಪಡೆಯಲು ಆಧಾರ್ ಕಡ್ಡಾಯ ಮಾಡಬೇಡಿ ಎಂದು ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಅಲ್ಲದೆ ಅಕ್ರಮವಾಗಿ ದೇಶದೊಳಕ್ಕೆ ನುಸುಳುವವರಿಗೂ ಆಧಾರ್ ಕಾರ್ಡ್ ವಿತರಿಸಬೇಡಿ ಎಂದು ಎಚ್ಚರಿಸಿದೆ.

ಈಗಾಗಲೇ ಕೆಲವು ರಾಜ್ಯಗಳಲ್ಲಿ, ಗ್ಯಾಸ್ ಸಬ್ಸಿಡಿ, ಬ್ಯಾಂಕ್ ಖಾತೆ ತೆರೆಯಲು ಹಾಗೂ ವಿವಾಹ ನೋಂದಣಿ ಸೇರಿದಂತೆ ಹಲವು ಸರ್ಕಾರಿ ಸೌಲಭ್ಯ ಪಡೆಯಲು ಆಧಾರ್ ಕಾರ್ಡ್ ಕಡ್ಡಾಗೊಳಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.