ಈಗಿನ ಸುದ್ದಿ

ಇಶ್ರಾತ್ ನಕಲಿ ಎನ್‌ಕೌಂಟರ್: ಸಿಬಿಐನಿಂದ ಪ್ರಫುಲ್ ಪಟೇಲ್ ವಿಚಾರಣೆ

Published On :

ಗಾಂಧಿನಗರ: ಇಶ್ರಾತ್ ಜಹಾನ್ ನಕಲಿ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಮಾಜಿ ಗೃಹ ಸಚಿವ ಪ್ರಫುಲ್ ಪಟೇಲ್‌ನನ್ನು ಸಿಬಿಐ ಅಧಿಕಾರಿಗಳು ಮಂಗಳವಾರ ವಿಚಾರಣೆಗೆ ಒಳಪಡಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಫುಲ್ ಪಟೇಲರನ್ನು ವಶಕ್ಕೆ ಪಡೆದಿರುವ ಸಿಬಿಐ ಅಧಿಕಾರಿಗಳು ಗಾಂಧಿನಗರದ ಗುಪ್ತ ಸ್ಥಳದಲ್ಲಿ ವಿಚಾರಣೆಗೆ ಒಳಪಡಿಸಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ. ನಕಲಿ ಎನ್‌ಕೌಂಟರ್‌ಗೆ ಸಂಬಂಧಿಸಿದಂತೆ ನಿನ್ನೆಯಷ್ಟೆ ಕಾನೂನು ಸಚಿವ ಪ್ರದೀಪ್ ಕುಮಾರ್ ಸಿಂಗ್ ಅವರನ್ನು ವಿಚಾರಣೆಗೆ ಒಳಪಡಿಸಿದ ಬೆನ್ನಲ್ಲೇ ಇದೀಗ ಮಾಜಿ ಸಚಿವರನ್ನು ವಿಚಾರಣೆ ಒಳಪಡಿಸಿದ್ದಾರೆ.

ಸಿಬಿಐ ಅಧಿಕಾರಿಗಳು ಈಗಾಗಲೇ ಶಿಕ್ಷಣ ಸಚಿವ ಬುಪೇಂದ್ರಸಿನ್ಹಾ ಮತ್ತು ಅಡ್ವೋಕೇಟ್ ಜನರಲ್ ಕಮಲ್ ತ್ರಿವೇದಿ ಅವರಿಗೆ ವಿಚಾರಣೆಗೆ ಸಹಕರಿಸುವಂತೆ ಸಮನ್ಸ್ ಜಾರಿಮಾಡಿದೆ.

ನಕಲಿ ಎನ್‌ಕೌಂಟರ್‌ಗೂ ಮುನ್ನ ಸಚಿವರುಗಳು ಹಾಗೂ ಪೊಲೀಸ್ ಅಧಿಕಾರಿಗಳ ನಡುವಣ ಅಡ್ವೋಕೇಟ್ ಜನರಲ್ ಕಮಲ್ ತ್ರಿವೇದಿ ಅವರ ನಿವಾಸದಲ್ಲಿ 2011ರಲ್ಲಿ ಸಭೆ ನಡೆದಿದ್ದು, ಇದರ ಆಡಿಯೋ ತುಣುಕುಗಳ ಆಧಾರದ ಮೇಲೆ ಈ ಇಬ್ಬರಿಗೂ ಸಮನ್ಸ್ ಜಾರಿಮಾಡಿದೆ.

ಈ ಸಭೆಯಲ್ಲಿ ಭಾಗವಹಿಸಿದ್ದ ಆರೋಪದ ಮೇಲೆ ಇಬ್ಬರು ಅಧಿಕಾರಿಗಳಾದ ಎ.ಕೆ ಶರ್ಮಾ ಮತ್ತು ಜಿ.ಸಿ ಮುರ್ಮು ಅವರನ್ನು ಸಿಬಿಐ ವಿಚಾರಣೆಗೆ ಒಳಪಡಿಸಿತ್ತು.

2004ರಲ್ಲಿ ಅಹಮದಾಬಾದ್‌ನ ಹೊರವಲಯದಲ್ಲಿ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂಬ ಕಾರಣ ನೀಡಿ ಇಶ್ರಾತ್ ಜಹಾನ್ ಸೇರಿದಂತೆ ಮೂವರನ್ನು ಕ್ರೈಂ ಬ್ರಾಂಚ್ ಪೊಲೀಸರು ಎನ್‌ಕೌಂಟರ್ ಮಾಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.