ಮೋದಿ ಆರ್‌ಎಸ್‌ಎಸ್‌ಗೂ ಅರ್ಥವಾಗಿಲ್ಲ: ಅನಂತಮೂರ್ತಿ

ಬೆಂಗಳೂರು: ಗುಜರಾತ್ ಮುಖ್ಯಮಂತ್ರಿ ಹಾಗೂ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ವಿರುದ್ಧ ಮಂಗಳವಾರ ಮತ್ತೆ ವಾಗ್ದಾಳಿ ನಡೆಸಿರುವ ಜ್ಞಾನಪೀಠ ಪುರಸ್ಕೃತ ಸಾಹಿತಿ ಡಾ.ಯು.ಆರ್.ಅನಂತಮೂರ್ತಿ, ಮೋದಿ ಆರ್‌ಎಸ್‌ಎಸ್‌ಗೂ ಅರ್ಥವಾಗದ ವ್ಯಕ್ತಿ ಎಂದಿದ್ದಾರೆ.
ಇಂದು ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಏರ್ಪಡಿಸಲಾಗಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅನಂತಮೂರ್ತಿ, ಈಗಿನ ರಾಜಕೀಯ ಮಾಹಾಭಾರತ ಇದ್ದಂತೆ. ರಾಜಕಾರಣಿಗಳಿಗೆ ವಿವೇಕ ಇರಬೇಕು. ವಿವೇಕದಿಂದ ಆಲೋಚಿಸಿದರೆ ಮಾತ್ರ ರಾಜಕೀಯದಲ್ಲಿ ಹೊಸತನ ಕಂಡುಕೊಳ್ಳಲು ಸಾಧ್ಯ. ಆದರೆ ನಮ್ಮ ರಾಜಕಾರಣಿಗಳಿಗೆ ವಿವೇಕ ಹಾಗೂ ಪ್ರಜ್ಞೆ ಎರಡೂ ಇಲ್ಲ ಎಂದಿದ್ದಾರೆ.
ಕೋಮು ಗಲಭೆಯಂತಹ ಸಾಮೂಹಿಕ ಹಿಂಸಾಚಾರ ಪ್ರಕರಣಗಳಲ್ಲಿ ಆರೋಪಿಗಳನ್ನು ಪತ್ತೆಹಚ್ಚುವುದು ಕಷ್ಟ ಎಂದಿರುವ ಅನಂತಮೂರ್ತಿ, ಗೋಧ್ರಾ ಹಾಗೂ ಸಿಖ್ ಹತ್ಯಾಕಾಂಡವನ್ನು ತಾವು ವಿರೋಧಿಸುವುದಾಗಿ ಹೇಳಿದ್ದಾರೆ.
ಪ್ರಾಚೀನ ಕಾಲದಲ್ಲಿ ಯಜ್ಞಕುಂಡದಲ್ಲಿ ಗೋವಧೆ ನಡೆಯುತ್ತಿತ್ತು. ಬ್ರಾಹ್ಮಣರೇ ಗೋವುಗಳನ್ನು ಬಲಿ ಕೊಡುತ್ತಿದ್ದರು ಎಂದಿರುವ ಅನಂತಮೂರ್ತಿ, ಪ್ರಾಚೀನ ಕಾಲದಲ್ಲಿನ ಹಿಂದೂ ಧಾರ್ಮಿಕತೆ ನಮಗೆ ಅರ್ಥವಾಗಲ್ಲ ಎಂದು ಹೇಳಿದ್ದಾರೆ.
ಇದೇ ವೇಳೆ, ತಾವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಬಲಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅನಂತಮೂರ್ತಿ, ಸಿದ್ದರಾಮಯ್ಯ ಕಾಂಗ್ರೆಸೇತರ ಮುಖ. ಹೀಗಾಗಿ ನಾನು ಅವರನ್ನು ಬೆಂಬಲಿಸಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಇನ್ನು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರಧಾನಿಯಾಗಲು ಸಮರ್ಥ ವ್ಯಕ್ತಿ ಅಲ್ಲ, ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಅನಂತಮೂರ್ತಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


