ಈಗಿನ ಸುದ್ದಿ

ಪಾಕಿಸ್ತಾನ: ಭೂಕಂಪದಲ್ಲಿ ಸತ್ತವರ ಸಂಖ್ಯೆ 327ಕ್ಕೇರಿಕೆ

Published On :

ಇಸ್ಲಾಮಾಬಾದ್: ಪಾಕಿಸ್ತಾನದ ನೈರುತ್ಯ ಭಾಗದಲ್ಲಿ ಮಂಗಳವಾರ ಸಂಭವಿಸಿದ ಪ್ರಬಲ ಭೂಕಂಪನದಲ್ಲಿ ಮೃತಪಟ್ಟವರ ಸಂಖ್ಯೆ 327ಕ್ಕೇರಿದೆ ಎಂದು ಬುಧವಾರ ಮೂಲಗಳು ತಿಳಿಸಿವೆ.

ಬಲೂಚಿಸ್ತಾನದ ಆರು ಜಿಲ್ಲೆಗಳು ನಿನ್ನೆ ಸಂಭವಿಸಿದ ಪ್ರಬಲ ಭೂಕಂಪನಕ್ಕೆ ತುತ್ತಾಗಿದ್ದು, ಆವಾರನ್ ಜಿಲ್ಲೆಯ ಮೇಲೆ ಭೂಕಂಪದ ಪ್ರಭಾವ ಅಧಿಕವಾಗಿದೆ. ಸಂಜೆ 5 ಗಂಟೆಯಲ್ಲಿ ಸಂಭವಿಸಿದ ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 7.7 ರಷ್ಟು ದಾಖಲಾಗಿತ್ತು.

ಆವಾರನ್ ಜಿಲ್ಲೆಯಲ್ಲಿ ಭೂಕಂಪದ ತೀವ್ರತೆಗೆ ಹಲವು ಕಟ್ಟಡಗಳು ನೆಲ ಸಮಗೊಂಡಿದ್ದು ಹಲವು ಮಂದಿ ಕಟ್ಟಡದ ಕೆಳಗೆ ಸಿಲುಕಿರುವ ಸಾಧ್ಯತೆಗಳಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಆವಾರನ್‌ನಲ್ಲಿ ಈಗಾಗಲೇ ಸುಮಾರು 80 ಮಂದಿ ಮೃತಪಟ್ಟಿದ್ದು, 200 ಮಂದಿ ಗಾಯಗೊಂಡಿರುವುದಾಗಿ ಮೂಲಗಳು ತಿಳಿಸಿವೆ.

ಬಲೂಚಿಸ್ತಾನ್ ಸರ್ಕಾರವು ಭೂಕಂಪ ಪೀಡಿತ ಜಿಲ್ಲೆಗಳಲ್ಲಿ ತುರ್ತುಪರಿಸ್ಥಿತಿ ಘೋಷಿಸಿದೆ. ಸೇನಾ ಸಿಬ್ಬಂದಿ ಮತ್ತು ಇತರೆ ರಕ್ಷಣಾ ಪಡೆಗಳ ನೆರವಿನಿಂದ ರಕ್ಷಣಾ ಪರಿಹಾರ ಕಾರ್ಯ ಭರದಿಂದ ಸಾಗಿದೆ. ಪಾಕ್ ಸೇನೆಯು ಇಂದು 600ಕ್ಕೂ ಹೆಚ್ಚು ಸೈನಿಕರನ್ನು ನೆರವಿಗಾಗಿ ಕಳುಹಿಸಿದ್ದು, ಒಟ್ಟು 900 ಸೈನಿಕರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವುದಾಗಿ ಸೇನಾ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.