ಬಿಬಿಎಂಪಿ ಇಬ್ಭಾಗ ಖಚಿತ

ಬೆಂಗಳೂರು: ಬೃಹತ್ ಬೆಂಗಳೂರು ಮಾಹಾನಗರ ಪಾಲಿಕೆ(ಬಿಬಿಎಂಪಿ) ಇಬ್ಭಾಗವಾಗುವುದು ಬಹುತೇಕ ಖಚಿತವಾಗಿದ್ದು, ಬಿಬಿಎಂಪಿ ವಿಭಜನೆ ಕುರಿತು ನಗರಾಭಿವೃದ್ಧಿ ಇಲಾಖೆ ಹಾಗೂ ಬಿಬಿಎಂಪಿಯ ಮಾಜಿ ಆಯುಕ್ತರ ಸಮಿತಿ ಬುಧವಾರ ಸರ್ಕಾರಕ್ಕೆ ವರದಿ ನೀಡಿದೆ.
ಈ ಬಗ್ಗೆ ಇಂದು ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಬೆಂಗಳೂರು ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಅವರು, ಬಿಬಿಎಂಪಿಯನ್ನು ಎರಡು ಅಥವಾ ಮೂರು ಭಾಗಗಳಾಗಿ ವಿಂಗಡಿಸಬಹುದು ಎಂದು ಸಮಿತಿ ಸರ್ಕಾರಕ್ಕೆ ವರದಿ ನೀಡಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಅಲ್ಲದೆ ಸಚಿವ ಸಂಪುಟ ಒಪ್ಪಿಗೆ ನೀಡಿದ ನಂತರ ಬಿಬಿಎಂಪಿಯನ್ನು ಎರಡು ಅಥವಾ ಮೂರು ಭಾಗವಾಗಿ ವಿಭಜನೆ ಮಾಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಬಿಬಿಎಂಪಿ ವಿಭಜನೆ ಕುರಿತು ವರದಿ ನೀಡುವಂತೆ ನಗರಾಭಿವೃದ್ಧಿ ಮತ್ತು ಬಿಬಿಎಂಪಿ ಮಾಜಿ ಆಯುಕ್ತರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಆಡಳಿತದ ಹಿತದೃಷ್ಟಿಯಿಂದ ಬಿಬಿಎಂಪಿ ವಿಭಜನೆ ಮಾಡುವ ಬಗ್ಗೆ ವರದಿ ನೀಡುವಂತೆ ಸಮಿತಿಗೆ ಸೂಚಿಸಲಾಗಿತ್ತು.
ಬೆಂಗಳೂರು ಮಾಹಾನಗರ ಬೃಹತ್ ಪ್ರಮಾಣದಲ್ಲಿ ಬೆಳೆಯುತ್ತಿದ್ದು, ಒಬ್ಬರು ಆಯುಕ್ತರು ಮತ್ತು ಮೇಯರ್ಗಳಿಂದ ಇದನ್ನು ನಿರ್ವಹಿಸುವುದು ಕಷ್ಟ. ಹೀಗಾಗಿ ಬಿಬಿಬಿಎಂಪಿಯನ್ನು ಇಬ್ಭಾಗ ಮಾಡಬೇಕು ಎಂಬ ಮಾತುಗಳು ಕೇಳಿ ಬಂದಿದ್ದವು. ಅಲ್ಲದೆ ಕೆಲವು ದಿನಗಳ ಹಿಂದ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಬಿಬಿಎಂಪಿ ವಿಭಜನೆ ಕುರಿತು ಮಾತನಾಡಿದ್ದರು.
ಈಗ ಆಯ್ಕೆಯಾಗಿರುವ ಸದಸ್ಯರ ಅವಧಿ ಮುಗಿದ ಬಳಿಕ ಬಿಬಿಎಂಪಿಯನ್ನು ಇಬ್ಭಾಗ ಮಾಡುವ ಸಾಧ್ಯತೆ ಇದ್ದು, ಇನ್ನು ಹಲವು ಹೊಸ ವಾರ್ಡ್ಗಳು ಬಿಬಿಎಂಪಿ ವ್ಯಾಪ್ತಿಗೆ ಬರಲಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


