ಈಗಿನ ಸುದ್ದಿ

ಕೇಂದ್ರದಿಂದ 7ನೇ ವೇತನ ಆಯೋಗ ಪ್ರಕಟ

Published On :

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೊಂದು ಸಿಹಿ ಸುದ್ದಿ. ವೇತನ ಮತ್ತು ನಿವೃತ್ತಿ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ 7ನೇ ವೇತನ ಆಯೋಗವನ್ನು ಬುಧವಾರ ಕೇಂದ್ರ ಸರ್ಕಾರ ಪ್ರಕಟ ಮಾಡಿದೆ.

7ನೇ ವೇತನ ಆಯೋಗವನ್ನು ಇಂದು ಪ್ರಧಾನಿ ಮನಮೋಹನ್ ಸಿಂಗ್ ಅವರು ಅಂಗೀಕರಿಸಿದ್ದು, ಈ ವೇತನ ಆಯೋಗವು ಜನವರಿ 1, 2016ರಿಂದ ಜಾರಿಗೆ ಬರುವ ಸಾಧ್ಯತೆಗಳಿವೆ ಎಂದು ಕೇಂದ್ರ ವಿತ್ತ ಸಚಿವ ಪಿ. ಚಿದಂಬರಂ ಅವರು ತಿಳಿಸಿದ್ದಾರೆ.

7ನೇ ವೇತನ ಆಯೋಗದ ಶಿಫಾರಸ್ಸಿನ ಮೇರೆಗೆ ಸುಮಾರು 50 ಲಕ್ಷ ಕೇಂದ್ರ ಸರ್ಕಾರದ ನೌಕರರಿಗೆ ಲಾಭದಾಯಕವಾಗಲಿದೆ. ಇದರಲ್ಲಿ ರಕ್ಷಣಾ ಇಲಾಖೆ ಮತ್ತು ರೇಲ್ವೇ ಇಲಾಖೆಯ ನೌಕರರು ಸೇರಿದ್ದಾರೆ. ಅಲ್ಲದೆ ನಿವೃತ್ತಿ ವೇತನ ಪಡೆಯುತ್ತಿರುವ ಸುಮಾರು 30 ಲಕ್ಷ ನೌಕರರಿಗೆ ಇದರಿಂದ ಲಾಭವಾಗಲಿದೆ.

ಮುಂದಿನ ನವೆಂಬರ್ ತಿಂಗಳಿನಲ್ಲಿ 5 ರಾಜ್ಯಗಳಲ್ಲಿ ನಡೆಯುವ ವಿಧಾನಸಭಾ ಚುನಾವಣೆ ಹಾಗೂ ಮುಂದಿನ ವರ್ಷದಲ್ಲಿ ನಡೆಯುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ 7ನೇ ವೇತನ ಆಯೋಗವನ್ನು ಒಪ್ಪಿಕೊಂಡಿದೆ ಎನ್ನಲಾಗುತ್ತಿದೆ.

ಕೇಂದ್ರ ಸರ್ಕಾರಿ ನೌಕರರ ವೇತನ ಭತ್ಯೆ ಹೆಚ್ಚಳ ಸೇರಿದಂತೆ ಹಲವು ವಿಚಾರಗಳಿಗೆ ಸಂಬಂಧಿಸಿದಂತೆ 7ನೇ ವೇತನ ಆಯೋಗವು ಮುಂದಿನ ಎರಡು ವರ್ಷಗಳಲ್ಲಿ ಸಂಪೂರ್ಣ ಮಾಹಿತಿ ನೀಡಲಿದೆ. ಆಯೋಗ ನೀಡಿದ ವರದಿ ಅನ್ವಯ ಕೇಂದ್ರ ಸರ್ಕಾರಿ ನೌಕರರ ಸಂಬಳವನ್ನು ಹೆಚ್ಚಿಸಲಾಗುತ್ತದೆ. ಈ ಆಯೋಗದ ಶಿಫಾರಸ್ಸಿನಂತೆ ನೌಕರರ ವೇತನ ಹೆಚ್ಚಳ ಜನವರಿ 1, 2016ರಿಂದ ಜಾರಿಗೆ ಬರಲಿದೆ.

7ನೇ ಆಯೋಗದ ಮುಖ್ಯಸ್ಥರು ಸೇರಿದಂತೆ ಸದಸ್ಯರ ಹೆಸರುಗಳನ್ನು ಸದ್ಯದಲ್ಲೇ ಅಂತಿಮಗೊಳಿಸಲಾಗುವುದು ಎಂದು ಚಿದಂಬರಂ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.