ಕಲ್ಲಿದ್ದಲು ಹಗರಣ: ನಾಳೆ ನವೀನ್ ಜಿಂದಾಲ್ ವಿಚಾರಣೆ ಸಾಧ್ಯತೆ
ನವದೆಹಲಿ: ಕಾಂಗ್ರೆಸ್ ಸಂಸದ ಮತ್ತು ಕೈಗಾರಿಕೋದ್ಯಮಿ ನವೀನ್ ಜಿಂದಾಲ್ ಅವರನ್ನು ಕೇಂದ್ರ ತನಿಖಾ ದಳ(ಸಿಬಿಐ) ನಾಳೆ ವಿಚಾರಣೆಗೊಳಪಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣದಲ್ಲಿ ನವೀನ್ ಜಿಂದಾಲ್ ಅವರು ಪ್ರಮುಖ ಆರೋಪಿಯಾಗಿದ್ದು, ಅವರನ್ನು ಸಿಬಿಐ ವಿಚಾರಣೆಗೊಳಪಡಿಸುವು ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಕಳೆದ ಜೂನ್ ತಿಂಗಳಿನಲ್ಲಿ ಪ್ರಕರಣದ ಸಂಬಂಧ ಉದ್ಯಮಿ ನವೀನ್ ಜಿಂದಾಲ್ ಹಾಗೂ ಕಲ್ಲಿದ್ದಲು ಇಲಾಖೆಯ ಮಾಜಿ ರಾಜ್ಯ ಸಚಿವ ದಾಸರಿ ನಾರಾಯಣರಾವ್ ಅವರ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿತ್ತು.
ಸಂಚು, ವಂಚನೆ ಮತ್ತು ಲಂಚದ ಆರೋಪವನ್ನು ಜಿಂದಾಲ್ ಅವರ ಮೇಲೆ ಹೊರಿಸಲಾಗಿದೆ. ಕಲ್ಲಿದ್ದಲು ಗಣಿಗಳನ್ನು ನೀಡಿದ್ದಕ್ಕೆ ಪ್ರತಿಯಾಗಿ ದಸರಿ ನಾರಾಯಣ ರಾವ್ ಅವರ ಮಾಲೀಕತ್ವದ ಕಂಪನಿಯಲ್ಲಿ ಜಿಂದಾಲ್ ಅವರ ಕಂಪನಿಯು 2 ಕೋಟಿ ಹೂಡಿಕೆ ಮಾಡಿತ್ತು ಎಂದು ಸಿಬಿಐ ಆರೋಪಿಸಿದೆ.
ಜಿಂದಾಲ್ ಅವರಿಗೆ ಸಿಬಿಐ ನೋಟೀಸ್ ನೀಡಿದ್ದು, ವಿಚಾರಣೆಗೆ ಹಾಜರಗಬೇಕೆಂದು ಸೂಚಿಸಿದೆ. ಆದರೆ ಜಿಂದಾಲ್ ಅವರು ನಾಳೆ ವಿಚಾರಣೆ ಹಾಜರಾಗುವ ಸಾಧ್ಯತೆ ಇದ್ದು, ದಿನಾಂಕ ನಿಗದಿ ಪಡಿಸಿಲ್ಲ ಎಂದು ಮೂಲಗಳು ತಿಳಿಸಿವೆ.
ಜಿಂದಾಲ್ ಸ್ಟೀಲ್ಸ್ ಅಂಡ್ ಪವರ್, ಗಗನ್ ಸ್ಪಾಂಜ್ ಕಂಪನಿಗಳು 2008ರಲ್ಲಿ ಜಾರ್ಖಂಡ್ನ ಬಿರ್ಭೂಮ್ ಜಿಲ್ಲೆಯ ಅಮರಕೊಂಡ ಮುರ್ಗದಂಗಲ್ ಕಲ್ಲಿದ್ದಲು ಘಟಕದ ಗುತ್ತಿಗೆ ಪಡೆಯುವಲ್ಲಿ ವಂಚನೆ ಎಸಗಿವೆ ಎಂದು ಸಿಬಿಐ ಎಫ್ಐಆರ್ನಲ್ಲಿ ಆರೋಪಿಸಿದೆ.
ಕಾಂಗ್ರೆಸ್ ರಾಜ್ಯ ಸಭಾ ಸದಸ್ಯರಾಗಿದ್ದ ದಾಸರಿ ನಾರಾಯಣ ರಾವ್ ಅವರು 2004-06 ಮತ್ತು 2006-08 ಅವಧಿಯಲ್ಲಿ ಕಲ್ಲಿದ್ದಲು ಖಾತೆಯ ರಾಜ್ಯ ಸಚಿವರಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

