ಮುಂಬೈ ಗ್ಯಾಂಗ್ರೇಪ್: ಆರೋಪಿ ಪರಾರಿಯಾಗಿಲ್ಲ-ಜೈಲು ಅಧಿಕಾರಿ
ಮುಂಬೈ: ಪತ್ರಿಕಾ ಛಾಯಾಗ್ರಾಹಕಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ಐವರು ಆರೋಪಿಗಳಲ್ಲಿ ಓರ್ವ ಆರೋಪಿ ಜೈಲಿನಿಂದ ಪರಾರಿಯಾಗಿದ್ದಾನೆ ಎಂದು ಮಾದ್ಯಮಗಳಲ್ಲಿ ಬಿತ್ತರಿಸುತ್ತಿದ್ದಂತೆ ಎಚ್ಚೆತ್ತುಕೊಂಡ ಜೈಲು ಅಧಿಕಾರಿಗಳು ಆರೋಪಿ ಪರಾರಿಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಆರೋಪಿ ಸಿರಾಜ್ ಉರ್ ರೆಹಮಾನ್ ಇಂದು ಬೆಳಗ್ಗೆ ಥಾಣೆ ಜೈಲಿನಿಂದ ಪರಾರಿಯಾಗಿದ್ದಾನೆ ಎಂದು ಹೇಳಲಾಗಿತ್ತು. ಆದರೆ ಆರೋಪಿ ದೈಹಿಕವಾಗಿ ಥಾಣೆ ಜೈಲಿನಲ್ಲಿದ್ದನು ಎಂದು ಜೈಲು ಅಧಿಕಾರಿ ಯುಟಿ ಪವಾರ್ ಹೇಳಿದ್ದಾರೆ.
ಇಂದು ಆರೋಪಿ ಪ್ರಕರಣದ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರಾಗಬೇಕಿತ್ತು. ಆದರೆ ಆರೋಪಿ ನ್ಯಾಯಾಲಯಕ್ಕೆ ಬರದಿದ್ದ ಕಾರಣ ಇಷ್ಟೊಂದು ಗೊಂದಲ ಸೃಷ್ಟಿಯಾಗಿದೆ ಎನ್ನಲಾಗಿದೆ.
ಆಗಸ್ಟ್ 22ರಂದು ಮುಂಬೈನ ಶಕ್ತಿಮಿಲ್ಸ್ ಕಾಂಪೌಂಡ್ನಲ್ಲಿ 22 ವರ್ಷದ ಪತ್ರಿಕಾ ಛಾಯಾಗ್ರಾಹಕಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ಮುಂಬೈ ಪೊಲೀಸರು ಕಳೆದ ಗುರುವಾರ ಐವರು ಆರೋಪಿಗಳ ವಿರುದ್ಧ ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಸಿದ್ದರು.
ಆರೋಪಿಗಳಾದ ಸಲೀಮ್ ಅನ್ಸಾರಿ, ವಿಜಯ್ ಜಾದವ್, ಮೋಹಮ್ಮದ್ ಕಸಿಮ್, ಸೀರಜ್ ಮತ್ತು ಅಪ್ರಾಪ್ತ ವಯಸ್ಕರೊರ್ವನನ್ನು ಪೊಲೀಸರು ಬಂಧಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

