ಈಗಿನ ಸುದ್ದಿ

ಕಾಶ್ಮೀರ: ಉಗ್ರರ ದಾಳಿಗೆ ಪ್ರಧಾನಿ ಖಂಡನೆ

ಕಾಶ್ಮೀರ: ಉಗ್ರರ ದಾಳಿಗೆ ಪ್ರಧಾನಿ ಖಂಡನೆ
Published On :

ಫ್ರಾಂಕ್‌ಫರ್ಟ್: ಜಮ್ಮು ಮತ್ತು ಕಾಶ್ಮೀರದಲ್ಲಿ ಗುರುವಾರ ಭಾರತೀಯ ಸೇನಾ ಕ್ಯಾಂಪ್‌ಗಳ ಮೇಲೆ ಮತ್ತು ಪೊಲೀಸರ ಮೇಲೆ ಉಗ್ರರು ನಡೆಸಿದ ದಾಳಿಯನ್ನು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಖಂಡಿಸಿದ್ದಾರೆ. ಅಲ್ಲದೆ ಈ ದಾಳಿ ಪಾಕಿಸ್ತಾದೊಂದಿಗೆ ನಡೆಸಲು ಉದ್ದೇಶಿಸಿರುವ ಶಾಂತಿ ಮಾತುಕತೆ ಮೇಲೆ ಯಾವುದೇ ಪರಿಣಾಮ ಬೀರಲ್ಲ ಎಂದು ಹೇಳಿದ್ದಾರೆ.

ಶಾಂತಿ ಕದಡುವ ಉದ್ದೇಶದಿಂದ ನಡೆಸಲಾಗುತ್ತಿರುವ ಉಗ್ರರ ಪ್ರಚೋದಿತ ದಾಳಿಗಳಲ್ಲಿ ಇದು ಒಂದು. ಇದರಿಂದ ಉಗ್ರರ ಉದ್ದೇಶ ಈಡೇರುವುದಿಲ್ಲ. ಶಾಂತಿ ಮಾತುಕತೆಯ ಮೂಲಕ ಗಡಿಯಲ್ಲಿ ಶಾಂತಿ ಸ್ಥಾಪಿಸುವ ನಮ್ಮ ಪ್ರಯತ್ನಗಳು ಮುಂದುವರೆಯಲಿವೆ ಎಂದು ಮನಮೋಹನ್ ಸಿಂಗ್ ತಿಳಿಸಿದ್ದಾರೆ.

ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಹಾಗೂ ಪ್ರಧಾನಿ ಮನಮೋಹನ್ ಸಿಂಗ್ ಅವರು ಇದೇ ಭಾನುವಾರ ಮಾತುಕತೆ ನಡೆಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇಂದು ಬೆಳಗ್ಗೆ ಶ್ರೀನಗರದ ಕತಾವುನಲ್ಲಿರುವ ಪೊಲೀಸ್ ಠಾಣೆ ಮೇಲೆ ಹಾಗೂ ಸಾಂಬಾ ಪಕ್ಕದಲ್ಲಿರುವ ಸೇನಾ ಶಿಬಿರದ ಮೇಲೆ ಉಗ್ರರು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ 12 ಮಂದಿ ಮೃತಪಟ್ಟಿದ್ದಾರೆ. ಸಿಂಗ್ ಹಾಗೂ ಷರೀಫ್ ಮಾತುಕತೆಗೆ ಕೇವಲು 72 ಗಂಟೆಗಳು ಬಾಕಿ ಇರುವಾಗಲೇ, ಪಾಕ್ ಉಗ್ರರು ಭಾರತದ ಗಡಿಯಲ್ಲಿ ಅಟ್ಟಹಾಸಗೈದಿದ್ದಾರೆ. ಇದರಿಂದ ಭಾರತ-ಪಾಕ್ ಮಾತುಕತೆ ಮುರಿದು ಬೀಳಲಿದೆ ಎನ್ನಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.