'ಕೈ' ಸಮನ್ವಯ ಸಮಿತಿ ರಚಿಸಿ ಸೋನಿಯಾ ಆದೇಶ

ನವದೆಹಲಿ: ಕಡೆಗೂ ರಾಜ್ಯದಲ್ಲಿ ಕಾಂಗ್ರೆಸ್ ಸಮನ್ವಯ ಸಮಿತಿ ರಚನೆಯಾಗಿದ್ದು, ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರಿಗೆ ಈ ಸಮಿತಿಯ ಚುಕ್ಕಾಣಿ ನೀಡಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಗುರುವಾರ ಆದೇಶ ಹೊರಡಿಸಿದ್ದಾರೆ.
ದಿಗ್ವಿಜಯ್ ಸಿಂಗ್ ನೇತೃತ್ವದ ಆರು ಸದಸ್ಯರನ್ನೊಳಗೊಂಡ ಈ ಸಮಿತಿಗೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರನ್ನು ಸಂಚಾಲಕರನ್ನಾಗಿ ನೇಮಿಸಲಾಗಿದೆ. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಕೆ.ಜೆ.ಜಾರ್ಜ್, ಡಿ.ಕೆ.ಶಿವಕುಮಾರ್ ಹಾಗೂ ಎಐಸಿಸಿ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್ ಅವರಿಗೆ ಸಮಿತಿಯಲ್ಲಿ ಸ್ಥಾನ ನೀಡಲಾಗಿದೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಹೆಚ್ಚಿನ ಹೊಂದಾಣಿಕೆಗಾಗಿ ಸಮನ್ವಯ ಸಮಿತಿ ರಚಿಸಲಾಗಿದೆ. ಇದು ಹೈಕಮಾಂಡ್ ನಿರ್ಧಾರವಾಗಿದ್ದು, ಮುಂದೆ ಕಾಂಗ್ರೆಸ್ ಅಧಿಕಾರದಲ್ಲಿರುವ ಎಲ್ಲ ರಾಜ್ಯಗಳಲ್ಲೂ ಸಮನ್ವಯ ಸಮಿತಿ ರಚನೆಯಾಗಲಿದೆ ಎಂದು ತಿಳಿಸಿದ್ದಾರೆ.
ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಸಮನ್ವ ಸಮಿತಿ ಸಂಚಾಲಕ ಪರಮೇಶ್ವರ ಅವರು, ಸಿಎಂ ಜೊತೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಯಾರಾದರೂ ವ್ಯತ್ಯಾಸ ತರಲು ಬಯಸಿದ್ದರೆ ಅವರಿಗೆ ಖಂಡಿತ ನಿರಾಸೆಯಾಗಲಿದೆ. ಸಚಿವರು ಹಾಗೂ ಶಾಸಕರಿಗೆ ಸಹಕಾರ ನೀಡುವ ಉದ್ದೇಶದಿಂದ ಸಮನ್ವ ಸಮಿತಿ ರಚಿಸಲಾಗಿದ್ದು, ಈ ಸಮಿತಿಯಲ್ಲಿ ರಾಜ್ಯಕ್ಕೆ ಸಂಬಂಧಿಸಿದ ವಿಚಾರಗಳ ಬಗ್ಗೆ ಹಾಗೂ ನೀತಿ ರೂಪಿಸುವ ವಿಚಾರಗಳ ಬಗ್ಗೆ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.
ಎಸ್.ಎಂ.ಕೃಷ್ಣ ಹಾಗೂ ವೀರಪ್ಪ ಮೊಯ್ಲಿ ಅವರ ಅವಧಿಯಲ್ಲೂ ಇಂತಹ ಸಮನ್ವ ಸಮಿತಿ ಇತ್ತು. ಆದರೆ ಅದು ಬೇರೆ ಬೇರೆ ರೂಪದಲ್ಲಿತ್ತು ಎಂದು ಪರಮೇಶ್ವರ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


