ಮೋದಿ ಕಾನ್ಪುರ್ ರ್ಯಾಲಿ ಅಕ್ಟೋಬರ್ 20ಕ್ಕೆ ಮುಂದೂಡಿಕೆ
ಕಾನ್ಪುರ್: ಭಾರತೀಯ ಜನತಾ ಪಕ್ಷದ ಪ್ರಧಾನಿ ಅಭ್ಯರ್ಥಿ ಹಾಗೂ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ಕಾನ್ಪುರ್ನಲ್ಲಿ ಕೈಗೊಳ್ಳಬೇಕಿದ್ದ ರ್ಯಾಲಿಯನ್ನು ಅಕ್ಟೋಬರ್ 15ರಿಂದ ಅಕ್ಟೋಬರ್ 20ಕ್ಕೆ ಮುಂದೂಡಲಾಗಿದೆ.
ಅಕ್ಟೋಬರ್ 13ರಂದು ದಸರಾ ಹಾಗೂ 14ರಂದು ಬಕ್ರೀದ್ ಎರಡು ಧರ್ಮಗಳ ಹಬ್ಬ ನಡೆಯಲಿದೆ. ಈ ಹಿನ್ನಲೆಯಲ್ಲಿ ಆಡಳಿತ ಮಂಡಳಿ 15 ಮತ್ತು 16ರಂದು ಪೂರ್ಣ ಭದ್ರತೆ ಕಲ್ಪಿಸಲು ಸಾಧ್ಯವಿಲ್ಲ. ಈ ಹಿನ್ನಲೆಯಲ್ಲಿ ರ್ಯಾಲಿಯನ್ನು 20ಕ್ಕೆ ಮುಂದೂಡಲಾಗಿದೆ ಎಂದು ಬಿಜೆಪಿ ತಿಳಿಸಿದೆ.
ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಮಿತ್ ಶಾ ಅವರು ಅಕ್ಟೋಬರ್ 3ರಂದು ಕಾನ್ಪುರಕ್ಕೆ ಭೇಟಿ ನೀಡಲಿದ್ದು, ರ್ಯಾಲಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಿದ್ದು, ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
3ಲಕ್ಷದ ಜನರು ರ್ಯಾಲಿಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

