ವ್ಯಕ್ತಿಗಳ ಹೆಸರಿನಲ್ಲಿ ಪ್ರಮಾಣ: 2 ಸಚಿವರು, 21 ಶಾಸಕರಿಗೆ ಹೈ ನೋಟಿಸ್

ಬೆಂಗಳೂರು: ಸಂವಿಧಾನ ಬಾಹಿರವಾಗಿ ಪ್ರಮಾಣ ವಚನ ಸ್ವೀಕರಿಸಿದ ಆರೋಪ ಎದುರಿಸುತ್ತಿರುವ ಇಬ್ಬರು ಸಚಿವರು ಸೇರಿದಂತೆ 23 ಶಾಸಕರಿಗೆ ಶುಕ್ರವಾರ ಹೈಕೋರ್ಟ್ ತುರ್ತು ನೋಟಿಸ್ ಜಾರಿ ಮಾಡಿದೆ.
ಸಚಿವರಾದ ಎಸ್.ಆರ್.ಪಾಟೀಲ್ ಹಾಗೂ ಎಚ್.ಆಂಜನೇಯ ಸೇರಿದಂತೆ 23 ಶಾಸಕರು ಸಂವಿಧಾನ ಬಾಹಿರವಾಗಿ ವ್ಯಕ್ತಿಗಳ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು, ಅವರನ್ನು ಹುದ್ದೆಯಲ್ಲಿ ಮುಂದುವರಿಸಬಾರದು ಎಂದು ಕೋರಿ ವಕೀಲ ಧರ್ಮಪಾಲ್ ಹಾಗೂ ಜೈಕುಮಾರ್ ಹಿರೇಮಠ್ ಅವರು ರಿಟ್ ಅರ್ಜಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ನ ಏಕ ಸದಸ್ಯ ಪೀಠ, ಈ ಸಂಬಂಧ ಇಬ್ಬರು ಸಚಿವರು ಸೇರಿದಂತೆ 23 ಶಾಸಕರಿಗೆ, ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೂ ನೋಟಿಸ್ ನೀಡಿದೆ.
ಅರ್ಜಿಯ ವಿಚಾರಣೆ ವೇಳೆ ಗರಂ ಆದ ನ್ಯಾಯಾಧೀಶರು, ಇಷ್ಟಬಂದಂತೆ ಪ್ರಮಾಣ ವಚನ ಸ್ವೀಕರಿಸುವುದಕ್ಕೆ ಸಂವಿಧಾನದಲ್ಲಿ ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


