ಪಾಕ್ನಲ್ಲಿ ಬಾಂಬ್ ಸ್ಫೋಟ: 17 ಸಾವು
ಪೇಶವಾರ್: ಚಲಿಸುತ್ತಿದ್ದ ಬಸ್ನಲ್ಲಿ ಬಾಂಬ್ ಸ್ಫೋಟಗೊಂಡ ಪರಿಣಾಮ 17 ಜನರು ಮೃತಪಟ್ಟಿರುವ ಘಟನೆ ಶುಕ್ರವಾರ ಪಾಕಿಸ್ತಾನದ ಪೇಶವಾರ್ನಲ್ಲಿ ನಡೆದಿದೆ.
ಪಾಕಿಸ್ತಾನದ ಈಶಾನ್ಯ ದಿಕ್ಕಿನಲ್ಲಿರುವ ಪೇಶವಾರ್ನಿಂದ 15 ಕಿ.ಮೀ ದೂರದಲ್ಲಿರುವ ಗುಲ್ಬೆಲಾ ಪ್ರದೇಶದಲ್ಲಿ ಸರ್ಕಾರಿ ನೌಕರರು ಪ್ರಯಾಣಿಸುತ್ತಿದ್ದ ಬಸ್ನಲ್ಲಿ ಬಾಂಬ್ ಸ್ಫೋಟಗೊಂಡು 17 ಜನರು ಸಾವನ್ನಪ್ಪಿದ್ದಾರೆ.
ಸುಮಾರು 70ಕ್ಕೂ ಹೆಚ್ಚು ಸರ್ಕಾರಿ ನೌಕರರು ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಬಾಂಬ್ ಸ್ಫೋಟಗೊಂಡಿದೆ.
ಬಸ್ನ ಹಿಂದೆ ಬಾಂಬ್ ಇರಿಸಲಾಗಿತ್ತು ಎಂದು ಹೇಳಿರುವ ಅಧಿಕಾರಿಗಳು 34ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಸರ್ಕಾರಿ ನೌಕರರನ್ನು ಹತ್ಯೆಗೈಯ್ಯಲೆಂದೆ ಬಸ್ನಲ್ಲಿ ಬಾಂಬ್ ಇರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಪಾಕಿಸ್ತಾನದ ಪೇಶವಾರ ಬಳಿ ಕಳೆದ ಒಂದು ವಾರದಿಂದ ಅನೇಕ ಬಾಂಬ್ ದಾಳಿ ನಡೆಯುತ್ತಿದ್ದು, ಜನರು ಭಯದ ನೆರಳಲ್ಲಿ ಬದುಕು ಸಾಗಿಸುತ್ತಿದ್ದಾರೆ. ಭಾನುವಾರ ಪೇಶವಾರದಲ್ಲಿರುವ ಐತಿಹಾಸಿಕ ಚರ್ಚ್ ಮೇಲೆ ಅವಳಿ ಬಾಂಬ್ ಸ್ಫೋಟಿಸಲಾಗಿತ್ತು. ಇದರ ಬೆನ್ನಲ್ಲೆ ಸರ್ಕಾರಿ ನೌಕರರನ್ನು ಗುರಿಯಾಗಿಸಿಟ್ಟುಕೊಂಡ ಉಗ್ರರು ಬಸ್ ಹಿಂದೆ ಬಾಂಬ್ ಇರಿಸಿ ಸ್ಫೋಟಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

