ಈಗಿನ ಸುದ್ದಿ

ಸುಪ್ರೀಂ ತೀರ್ಪನ್ನು ಸ್ವಾಗತಿಸಿದ ಮೋದಿ

Published On :

ನವದೆಹಲಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗೆ ಸ್ಪರ್ಧಿಸಿದ ಎಲ್ಲ ಅಭ್ಯರ್ಥಿಗಳನ್ನು ತಿರಸ್ಕರಿಸುವ ಹಕ್ಕು ಮತದಾರನಿಗೆ ಇದೆ ಎಂದು ಸುಪ್ರೀಂ ಕೋರ್ಟ್ ಹೊರಡಿಸಿದ ತೀರ್ಪನ್ನು ಗುಜರಾತ್ ಮುಖ್ಯಮಂತ್ರಿ ಹಾಗೂ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಸ್ವಾಗತಿಸಿದ್ದಾರೆ.

ಸುಪ್ರೀಂ ಕೋರ್ಟ್‌ನ ತೀರ್ಪು ಸಮಾಜದಲ್ಲಿ ಒಳಿತನ್ನು ಮಾಡಲಿದೆ ಎಂದ ಮೋದಿ, ಸುಪ್ರೀಂ ಕೋರ್ಟ್‌ನ ಇಂತಹ ಐತಿಹಾಸಿಕ ತೀರ್ಪಿನಿಂದಾಗಿ ನಮ್ಮ ದೇಶದ ರಾಜಕೀಯದಲ್ಲಿ ಅನೇಕ ಬದಲಾವಣೆ ಆಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಇದರಿಂದ ಪ್ರಜಾಪ್ರಭುತ್ವದ ವ್ಯವಸ್ಥೆ ಗಟ್ಟಿಗೊಳ್ಳಲಿದೆ. ಇನ್ನೂ ಮುಂದೆ ಪ್ರತಿಯೊಬ್ಬ ನಾಗರಿಕನು ಮತದಾನ ಮಾಡುತ್ತಾನೆ ಎಂಬ ನಂಬಿಕೆ ಇದೆ. ಅಭ್ಯರ್ಥಿಗಳನ್ನು ತಿರಸ್ಕರಿಸುವ ಹಕ್ಕು ಮತದಾರನಿಗೆ ನೀಡಿರುವುದರಿಂದ ಚುನಾವಣೆಯಲ್ಲಿ ನಡೆಯುವಂತಹ ಅನೇಕ ಅಕ್ರಮಗಳನ್ನು ತಡೆಯಬಹುದಾಗಿದೆ ಎಂದು ಮೋದಿ ಅಭಿಪ್ರಾಯ ಪಟ್ಟಿದ್ದಾರೆ.

ಶುಕ್ರವಾರ ಮುಖ್ಯನಾಯಮೂರ್ತಿ ಪಿ.ಸದಾಶಿವಂ ಹಾಗೂ ನ್ಯಾಯಮೂರ್ತಿ ರಂಜನ್ ಪ್ರಕಾಶ ದೇಶಾಯಿ ಮತ್ತು ನ್ಯಾ.ರಂಜನ್ ಗೋಗೊಯಿ ಅವರನ್ನೊಳಗೊಂಡ ಸುಪ್ರೀಂ ಪೀಠ ಚುನಾವಣೆಗೆ ಸ್ಪರ್ಧಿಸಿದ ಎಲ್ಲ ಅಭ್ಯರ್ಥಿಗಳನ್ನು ತಿರಸ್ಕರಿಸುವ ಹಕ್ಕು ಮತದಾರನಿಗೆ ಇದೆ ಎಂದು ಹೇಳಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.