ಈಗಿನ ಸುದ್ದಿ

ಸೆ.30ರವರೆಗೆ ಸುರೇಶ್, ಸತೀಶ್ ಸೈಲ್ ಸಿಬಿಐ ವಶಕ್ಕೆ

ಸೆ.30ರವರೆಗೆ ಸುರೇಶ್, ಸತೀಶ್ ಸೈಲ್ ಸಿಬಿಐ ವಶಕ್ಕೆ
Published On :

ಬೆಂಗಳೂರು: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಶಾಸಕರಾದ ಸುರೇಶ್ ಬಾಬು ಹಾಗೂ ಸತೀಶ್ ಸೈಲ್ ಅವರನ್ನು ಸೆಪ್ಟೆಂಬರ್ 30ರವರೆಗೆ ಸಿಬಿಐ ವಶಕ್ಕೆ ನೀಡಿ ಶುಕ್ರವಾರ ಕೋರ್ಟ್ ಆದೇಶಿಸಿದೆ.

ಈ ಇಬ್ಬರು ಶಾಸಕರ ಸಿಬಿಐ ಕಷ್ಟಡಿ ಇಂದಿಗೆ ಅಂತ್ಯಗೊಂಡ ಹಿನ್ನೆಲೆಯಲ್ಲಿ ಇಂದು ಸಿಬಿಐ ವಿಶೇಷ ಕೋರ್ಟ್‌ಗೆ ಹಾಜರು ಪಡಿಸಿದ ಸಿಬಿಐ ಅಧಿಕಾರಿಗಳು, ಆರೋಪಿಗಳನ್ನು ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಿದರು.

ಸಿಬಿಐ ಅಧಿಕಾರಿಗಳ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ, ಕಂಪ್ಲಿ ಶಾಸಕ ಸುರೇಶ್ ಬಾಬು ಹಾಗೂ ಕಾರವಾರ ಶಾಸಕ ಸತೀಶ್ ಸೈಲ್ ಅವರನ್ನು ಮತ್ತೆ ಸಿಬಿಐ ವಶಕ್ಕೆ ನೀಡಿದೆ.

ಕಳೆದ ಗುರುವಾರ ಸುರೇಶ್ ಬಾಬು ಅವರನ್ನು ಬಂಧಿಸಿದ್ದ ಸಿಬಿಐ ಅಧಿಕಾರಿಗಳು, ಶುಕ್ರವಾರ ಸಂಜೆ ಪಕ್ಷೇತರ ಶಾಸಕ ಸತೀಶ್ ಸೈಲ್ ಅವರನ್ನು ಬಂಧಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.