ಈಗಿನ ಸುದ್ದಿ

ಪಕ್ಷ ವಿರೋಧಿ ಚಟುವಟಿಕೆ: ಟಿಎಂಸಿ ಎಂಪಿ ಅಮಾನತು

Published On :

ಕೊಲ್ಕತಾ: ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್(ಟಿಎಂಸಿ) ಪಕ್ಷದ ರಾಜ್ಯಸಭಾ ಸದಸ್ಯ ಕುನಾಲ್ ಘೋಶ್ ಅವರನ್ನು ಟಿಎಂಸಿ ಶನಿವಾರ ಅಮಾನತುಗೊಳಿಸಿದೆ.

ಕುನಾಲ್ ಘೋಶ್ ಅವರು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಹೆಚ್ಚಾಗಿ ಭಾಗವಹಿಸುತ್ತಿದ್ದು, ಅನೇಕ ಬಾರಿ ಅವರಿಗೆ ಎಚ್ಚರಿಕೆ ನೀಡಲಾಗಿತ್ತು. ಆದರೆ ಕುನಾಲ್ ಅವರು ಪಕ್ಷದ ವಿರುದ್ಧವಾಗಿ ಮಾತನಾಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಅವರನ್ನು ಪಕ್ಷ ಅಮಾನತುಗೊಳಿಸಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಪಾರ್ಥ ಚಟರ್ಜಿ ಹೇಳಿದ್ದಾರೆ.

ನಿನ್ನೆ ನಡೆದ ಪಕ್ಷದ ಸಭೆಯಲ್ಲಿ ಕುನಾಲ್ ಅವರನ್ನು ಅಮಾನತು ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಇದೇ ಮೊದಲ ಬಾರಿಗೆ ಪಕ್ಷ ಈ ರೀತಿ ನಿರ್ಧಾರ ತೆಗೆದುಕೊಂಡಿದೆ ಎಂದು ತಿಳಿಸಿದ್ದಾರೆ.

ಶಾರದ ಚಿಟ್ ಫಂಡ್ ಹಗರಣಕ್ಕೂ ಮತ್ತು ಟಿಎಂಸಿ ಪಕ್ಷಕ್ಕೂ ಸಂಬಂಧವಿದೆ ಎಂದು ಸಾರ್ವಜನಿಕವಾಗಿ ಪಕ್ಷದ ವಿರುದ್ಧ ಹೇಳಿಕೆ ನೀಡುತ್ತಿದ್ದರು. ಈಗಾಗಲೇ ಪ್ರಕರಣ ಸಂಬಂಧ ಪೊಲೀಸರು ಎರಡು ಬಾರಿ ಕುನಾಲ್ ಅವರನ್ನು ವಿಚಾರಣೆಗೊಳಪಡಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಕುನಾನ್ ಘೋಶ್ ಅವರು ಪಕ್ಷದ ಹಿರಿಯ ನಾಯಕರು ಶಾರದ ಚಿಟ್ ಫಂಡ್ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಬಹಿರಂಗವಾಗಿ ಹೇಳಿಕೆ ನೀಡುತ್ತಿದ್ದರು. ಈ ಹಿನ್ನಲೆಯಲ್ಲಿ ಟಿಎಂಸಿ ಅಮಾನತು ಮಾಡಿದೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.