ಅ.7ರಂದು 'ಶ್ರೀನಿ' ಭವಿಷ್ಯ ನಿರ್ಧಾರ

ಮುಂಬೈ: ಸ್ಪಾಟ್ ಫಿಕ್ಸಿಂಗ್ ಹಗರಣದಿಂದ ತೀವ್ರ ಮುಜುಗರಕ್ಕೀಡಾಗಿರುವ ಬಿಸಿಸಿಐ ಅಧ್ಯಕ್ಷ ಎನ್.ಶ್ರೀನಿವಾಸನ್ ಅವರ ಭವಿಷ್ಯ ಮುಂಬರುವ ಅಕ್ಟೋಬರ್ 7ರಂದು ನಿರ್ಧಾರವಾಗಲಿದೆ.
ಈ ಹಿಂದೆ ಶ್ರೀನಿವಾಸನ್ ಕಾರ್ಯ ವೈಖರಿ ಮತ್ತು ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಅವರ ಅಳಿಯ ಮೇಯಪ್ಪನ್ ಅವರ ಪಾತ್ರದ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದ ಬಿಸಿಸಿಐ ಪದಾಧಿಕಾರಿಗಳು 'ಶ್ರೀನಿ' ತಲೆದಂಡಕ್ಕೆ ಆಗ್ರಹಿಸಿದ್ದರು. ಶ್ರೀನಿವಾಸನ್ ಕಾರ್ಯ ವೈಖರಿ ಮತ್ತು ಆರೋಪಗಳು ಬಂದರೂ ಅಧ್ಯಕ್ಷ ಸ್ಥಾನ ತ್ಯಜಿಸದೇ ಇದ್ದ ಅವರ ಮೊಂಡುತನದಿಂದಾಗಿ ಬಿಹಾರ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ಆದಿತ್ಯಾ ವರ್ಮಾ ಅವರು ಶ್ರೀನಿವಾಸನ್ ರಾಜಿನಾಮೆಗೆ ಆಗ್ರಹಿಸಿದ್ದರು. ಅಲ್ಲದೆ ಅವರ ವಿರುದ್ಧ ಸುಪ್ರೀಂಕೋರ್ಟ್ನಲ್ಲಿ ದಾವೆ ಕೂಡ ಹೂಡಿದ್ದರು.
ಆದರೆ ನಿನ್ನೆ ಚೆನ್ನೈನಲ್ಲಿ ನಡೆದ ಬಿಸಿಸಿಐ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಶ್ರೀನಿವಾಸನ್ ಅವರನ್ನೇ ಮತ್ತೆ ಮೂರನೇ ಬಾರಿಗೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಶ್ರೀನಿವಾಸನ್ ಬಿಸಿಸಿಐ ಅಧ್ಯಕ್ಷಗಾದಿಗೆ ಸ್ಪರ್ಧಿಸಿದ ದಕ್ಷಿಣ ಭಾರತದ ಏಕೈಕ ಸ್ಪರ್ಧಿಯಾಗಿದ್ದರು. ಆದರೆ ಅವರು ಅಧ್ಯಕ್ಷರಾಗಿ ಆಯ್ಕೆಯಾದರೂ ಅವರ ವಿರುದ್ಧದ ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ ಅವರು ಅಧಿಕಾರವನ್ನು ವಹಿಸಿಕೊಳ್ಳುವಂತಿಲ್ಲ. ಹೀಗಾಗಿ ಸುಪ್ರೀಂಕೋರ್ಟ್ ನೀಡುವ ತೀರ್ಪು ಶ್ರೀನಿವಾಸನ್ ಅವರಿಗೆ ಮಹತ್ವದ್ದಾಗಿದೆ.
ನ್ಯಾಯಾಲಯ ಮುಂಬರುವ ಅಕ್ಟೋಬರ್ 7ರಂದು ಪ್ರಕರಣದ ತೀರ್ಪು ನೀಡುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ಆ ಮೂಲಕ ತೀವ್ರ ವಿವಾದಕ್ಕೆ ಗ್ರಾಸವಾಗಿದ್ದ ಶ್ರೀನಿವಾಸನ್ ಬಿಸಿಸಿಐ ಅಧ್ಯಕ್ಷಗಾದಿ ವಿಚಾರ ತಾರ್ಕಿಕ ಅಂತ್ಯಕಾಣುವ ಸಾಧ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


