ಈಗಿನ ಸುದ್ದಿ

ಕಡಪಗೆ ತೆರಳಲು ಜಗನ್ ಗೆ 'ಸಿಬಿಐ' ಷರತ್ತು ಬದ್ಧ ಅಪ್ಪಣೆ

Published On :

ಹೈದರಾಬಾದ್: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ವೈಎಸ್ ಜಗನ್ ಅವರು ಕಡಪ ಜಿಲ್ಲೆಗೆ ತೆರಳಲು ಸಿಬಿಐ ವಿಶೇಷ ನ್ಯಾಯಾಲಯ ಷರತ್ತುಬದ್ಧ ಅಪ್ಪಣೆ ನೀಡಿದೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಕಣ ಸಂಬಂಧ ಸತತ 16 ತಿಂಗಳುಗಳ ಕಾಲ ಸೆರೆವಾಸದಲ್ಲಿದ್ದ ವೈಎಸ್‌ಆರ್ ಕಾಂಗ್ರೆಸ್ ಸಂಸ್ಥಾಪಕ ಜಗನ್ ಮೋಹನ್ ರೆಡ್ಡಿ ಅವರು, ಆಂಧ್ರ ವಿಭಜನೆಯನ್ನು ವಿರೋಧಿಸಿ ಕಡಪ ಮತ್ತು ಗುಂಟೂರು ಜಿಲ್ಲೆಗಳಲ್ಲಿ ಹಮ್ಮಿಕೊಂಡಿರುವ ಸಮಾವೇಶದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಬೇಕು ಎಂದು ನ್ಯಾಯಾಲಯದಲ್ಲಿ ಮನವಿ ಮಾಡಿದ್ದರು. ಜಗನ್ ಅವರ ಮನವಿಯನ್ನು ವಿಚಾರಣೆಗೆ ತೆಗೆದುಕೊಂಡ ನ್ಯಾಯಾಲಯ ಜಗನ್‌ಗೆ ಷರತ್ತು ಬದ್ಧ ಅಪ್ಪಣೆ ನೀಡಿದೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಜಗನ್ ತಮ್ಮ ವರ್ಚಸ್ಸನ್ನು ಬಳಸಿ ಸಾಕ್ಷಿಗಳ ಮೇಲೆ ಪ್ರಭಾವ ಬೀರದಂತೆಯೂ ಮತ್ತು ನ್ಯಾಯಾಲಯ ಸೂಚಿಸಿದ ಅಧಿಕಾರಿಗಳ ಭದ್ರತೆಯ ನಡುವೆಯಲ್ಲಿಯೇ ಸಮಾವೇಶದಲ್ಲಿ ಪಾಲ್ಗೊಳ್ಳುವಂತೆ ಸಿಬಿಐ ವಿಶೇಷ ನ್ಯಾಯಾಲಯ ಸೂಚಿಸಿದೆ.

ಇದಕ್ಕೂ ಮೊದಲು ಸಿಬಿಐ ಪರ ವಕೀಲರು ಜಗನ್ ಅವರ ಮನವಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಅಲ್ಲದೆ ಪ್ರಕರಣ ಸಂಬಂಧ ಸಂಸದ ಜಗನ್ ಅವರು ಸಾಕ್ಷಿಗಳ ಪ್ರಭಾವ ಬೀರುವ ಸಾಧ್ಯತೆ ಇದ್ದು, ಅವರಿಗೆ ಅಪ್ಪಣೆ ನೀಡಬಾರದು ಎಂದು ಮನವಿ ಮಾಡಿದ್ದರು. ಉಭಯ ವಕೀಲರ ವಾದವನ್ನು ಆಲಿಸಿದ ನ್ಯಾಯಾಲಯ ಜಗನ್‌ಗೆ ಹೈದ್ರಾಬಾದ್ ತೊರೆಯಲು ಷರತ್ತು ಬದ್ಧ ಅಪ್ಪಣೆ ನೀಡಿದೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕಳೆದ 16 ತಿಂಗಳುಗಳಿಂದ ಸಿಬಿಐ ಅಧಿಕಾರಿಗಳ ವಶದಲ್ಲಿದ್ದ ವೈಎಸ್ ಜಗನ್ ಅವರು, ಇತ್ತೀಚೆಗೆ ಶರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ನ್ಯಾಯಾಲಯ ವಿಧಿಸಿದ್ದ ಷರತ್ತುಗಳ ಪೈಕಿ ಸಾಕ್ಷ್ಯಗಳ ಮೇಲೆ ಪ್ರಭಾವ ಬೀರಬಾರದು. ಸಾಕ್ಷ್ಯಗಳನ್ನು ನಾಶಪಡಿಸಬಾರದು ಮತ್ತು ಹೈದರಾಬಾದ್ ನಗರವನ್ನು ತೊರೆಯಬಾರದು ಎಂಬ ಅಂಶಗಳಿದ್ದವು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.