ಈಗಿನ ಸುದ್ದಿ

'ಗ್ರಾಮೀಣ ಮಹಿಳೆ' ವಿವಾದ: ಪ್ರಧಾನಿಗೆ ಶರೀಫ್ ಪತ್ರ

Published On :

ನವದೆಹಲಿ: ವಿವಾದಕ್ಕೆ ಕಾರಣವಾಗಿರುವ ಪಾಕಿಸ್ತಾನ ಪ್ರಧಾನಿ ನವಾಜ್ ಶರೀಫ್ ಅವರ 'ಗ್ರಾಮೀಣ ಮಹಿಳೆ' ಹೇಳಿಕೆಗೆ ಸಂಬಂಧಿಸಿದಂತೆ ಪಾಕಿಸ್ತಾನ ಸರ್ಕಾರ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಪತ್ರ ಬರೆಯುವ ಮೂಲಕ ಸ್ಪಷ್ಟನೆ ನೀಡಿದೆ.

ವಿವಾದಕ್ಕೆ ಸಂಬಂಧಿಸಿದಂತೆ ಪಾಕ್ ಪ್ರಧಾನಿ ನವಾಜ್ ಶರೀಫ್ ಅವರು ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಪತ್ರ ಬರೆದಿದ್ದು, ನಿಮ್ಮ ವಿರುದ್ಧ ನಾನು ಅಂತಹ ಕೆಳಮಟ್ಟದ ಭಾಷೆಯನ್ನು ಬಳಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ನಿನ್ನೆ ನವದೆಹಲಿಯಲ್ಲಿ ಬಿಜೆಪಿ ಪಕ್ಷ ಹಮ್ಮಿಕೊಂಡಿದ್ದ ವಿಕಾಸ ರ್ಯಾಲಿಯಲ್ಲಿ ಮಾತನಾಡಿದ್ದ, ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು, ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಪಾಕ್ ಪ್ರಧಾನಿ ಶರೀಫ್ ಅವರು 'ಗ್ರಾಮೀಣ ಮಹಿಳೆ' ಎಂದು ಟೀಕಿಸಿದ್ದಾರೆ ಎಂದು ಆರೋಪಿಸಿದ್ದರು.

ಅಲ್ಲದೆ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಈ ವಿಚಾರ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ನವಾಜ್ ಶರೀಫ್ ಅವರು ತಮ್ಮ ವಿದೇಶಾಂಗ ಕಾರ್ಯದರ್ಶಿ ಜಲೈಲ್ ಅಬ್ಬಾಸಿ ಅವರ ಮೂಲಕ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಶಿವಶಂಕರ್ ಮೆನನ್ ಅವರಿಗೆ ಸ್ಪಷ್ಟಿಕರಣ ನೀಡಿದ್ದಾರೆ. ಅಂತೆಯೇ ಈ ಬಗ್ಗೆ ಮೆನನ್ ಕೂಡ ಅಬ್ಬಾಸಿ ಅವರಿಗೆ ಪ್ರತಿಕ್ರಿಯೆ ನೀಡಿದ್ದು, ನಿಜಾಂಶದ ಬಗ್ಗೆ ತಮಗೆ ಅರಿವಿದ್ದು, ಪ್ರಧಾನಿ ಮನಮೋಹನ್ ಸಿಂಗ್ ಅವರಿಗೂ ಕೂಡ ಈ ಬಗ್ಗೆ ತಿಳಿದಿದೆ ಎಂದು ಹೇಳಿದ್ದಾರೆ.

ಖಾಸಗಿ ಮಾಧ್ಯಮವೊಂದು ಪಾಕ್ ಪ್ರಧಾನಿ ನವಾಜ್ ಶರೀಫ್ ಅವರು ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು 'ಗ್ರಾಮೀಣ ಮಹಿಳೆ' ಎಂದು ಟೀಕಿಸಿದ್ದು, ಈ ಬಗ್ಗೆ ಪ್ರಧಾನಿ ಮನಮೋಹನ್ ಸಿಂಗ್ ಅವರು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರೊಂದಿಗೆ ತಮ್ಮ ಅಸಮಾಧಾನವನ್ನು ಹಂಚಿಕೊಂಡಿದ್ದಾರೆ ಎಂದು ವರದಿ ಬಿತ್ತರಿಸಿತ್ತು. ಇದನ್ನೇ ಮುಂದಿಟ್ಟು ಕೊಂಡು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ನವಾಜ್ ಶರೀಫ್ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.