ಮುಜಾಫರ್ನಗರ ಗಲಭೆ: 3 ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ
ಮುಜಾಫರ್ನಗರ: ಮುಜಾಫರ್ನಗರದಲ್ಲಿ ನಡೆದ ಕೋಮು ಗಲಭೆ ಸಂದರ್ಭದಲ್ಲಿ ಮೂವರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಫುಗುನ ಹಳ್ಳಿಯ ಮೂವರು ಮಹಿಳೆಯರು, ಹಿಂಸಾಚಾರದ ವೇಳೆ ತಮ್ಮ ಮನೆಗೆ ನುಗ್ಗಿದ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿ, ಮನೆಗೆ ಬೆಂಕಿ ಇಟ್ಟಿದ್ದಾರೆಂದು ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ದೂರು ದಾಖಲಿಸಿದ್ದಾರೆ.
ಫುಗನ ಪೊಲೀಸ್ ಠಾಣೆಯಲ್ಲಿ ದೂರ ದಾಖಲಿಸಿಕೊಂಡಿರುವ ಪೊಲೀಸರು 17 ಆರೋಪಿಗಳ ವಿರುದ್ಧ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸೆಪ್ಟೆಂಬರ್ 7ರಂದು ಮುಜಾಫರ್ನಗರದಲ್ಲಿ ನಡೆದ ಕೋಮು ಗಲಭೆಗೆ 62 ಮಂದಿ ಬಲಿಯಾಗಿದ್ದರು. ಸಾವಿರಾರು ಜನರು ಮನೆಮಠ ಕಳೆದುಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

