ಈಗಿನ ಸುದ್ದಿ

ಅಮೆರಿಕ 'ಶಟ್‌ಡೌನ್‌': ದೊಡ್ಡಣ್ಣನ ಸರ್ಕಾರಿ ಸೇವೆ ಸ್ಥಗಿತ

ಅಮೆರಿಕ 'ಶಟ್‌ಡೌನ್‌': ದೊಡ್ಡಣ್ಣನ ಸರ್ಕಾರಿ ಸೇವೆ ಸ್ಥಗಿತ
Published On :

ವಾಷಿಂಗ್‌ಟನ್: 17 ವರ್ಷಗಳಲ್ಲಿ ಮೊದಲ ಬಾರಿಗೆ ಅಮೆರಿಕದಲ್ಲಿ ಬಿಕ್ಕಟ್ಟು ಸೃಷ್ಟಿಯಾಗಿದ್ದು, ಸರ್ಕಾರಿ ಸೇವೆಯನ್ನು ಸಂಪೂರ್ಣ ಸ್ಥಗಿತಗೊಳಿಸಲಾಗಿದೆ. ಇದರಿಂದ ವಿಶ್ವದ ದೊಡ್ಡಣ್ಣ, ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮ ಅವರಿಗೆ ಭಾರಿ ಹಿನ್ನೆಡೆಯಾಗಿದೆ.

ವಾರ್ಷಿಕ ಬಜೆಟ್‌ಗೆ ಸೆನೆಟ್‌ನಲ್ಲಿ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಅಗತ್ಯ ಸೇವೆಗಳಾದ ಪೊಲೀಸ್ ಹಾಗೂ ಭದ್ರತಾ ಸೇವೆ ಹೊರತು ಪಡಿಸಿ ಉಳಿದ ಎಲ್ಲಾ ರೀತಿಯ ಸರ್ಕಾರಿ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಅಮೆರಿಕದ 7,83,000 ಸರ್ಕಾರಿ ನೌಕರರಿಗೆ ವೇತನ ರಹಿತ ರಜೆ ನೀಡಲಾಗಿದೆ.

ಸೆಪ್ಟೆಂಬರ್ 30ಕ್ಕೆ ಅಮೆರಿಕ ಬಜೆಟ್ ಅವಧಿ ಅಂತ್ಯಗೊಂಡಿತ್ತು, ಆದರೆ ನೂತನ ಬಜೆಟ್‌ಗೆ ಅಮೆರಿಕ ಕಾಂಗ್ರೆಸ್‌ನಲ್ಲಿ ಒಪ್ಪಿಗೆ ಸಿಗದ ಹಿನ್ನೆಲೆಯಲ್ಲಿ ಸರ್ಕಾರಿ ಸಂಸ್ಥೆಗಳ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.