ಮೋದಿಯನ್ನು ಸಿಬಿಐ ಗುರಿಯಾಗಿಸಿಕೊಂಡಿದೆ: ಜೇಟ್ಲಿ
ನವದೆಹಲಿ: ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರನ್ನು ಸಿಬಿಐ ವಿನಾಕಾರಣ ಗುರಿಯಾಗಿಸಿಕೊಂಡಿದೆ ಎಂದು ಬಿಜೆಪಿ ಮುಖಂಡ ಅರುಣ್ ಜೇಟ್ಲಿ ಆರೋಪಿಸಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅರುಣ್ ಜೇಟ್ಲಿ ಅವರು, ಕೇಂದ್ರದ ಯುಪಿಎ ಸರ್ಕಾರ ತನ್ನ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ನರೇಂದ್ರ ಮೋದಿ ಅವರ ವಿರುದ್ಧ ಸಿಬಿಐ ಸಂಸ್ಥೆಯನ್ನು ಛೂ ಬಿಟ್ಟಿದೆ. ರಾಜಕೀಯವಾಗಿ ನಮ್ಮನ್ನು ಎದುರಿಸಲಾಗದೇ ಇಂತಹ ವಾಮಮಾರ್ಗವನ್ನು ಕಾಂಗ್ರೆಸ್ ಅನುಸರಿಸುತ್ತಿದೆ ಎಂದು ಜೇಟ್ಲಿ ಆರೋಪಿಸಿದ್ದಾರೆ.
ಅಲ್ಲದೆ ಈ ಬಗ್ಗೆ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಪತ್ರ ಬರೆದಿರುವ ಅರುಣ್ ಜೇಟ್ಲಿ, ಕೇಂದ್ರ ಸರ್ಕಾರ ಸಿಬಿಐ, ಎನ್ಐಎ ಮತ್ತು ಐಬಿ ಯಂತಹ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ವಿನಾಕಾರಣ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತು ಅವರ ಆಪ್ತ ಅಮಿತ್ ಶಾ ಅವರ ವಿರುದ್ಧ ಆರೋಪ ಹೊರಿಸಲಾಗುತ್ತಿದೆ. ರಾಜಕೀಯವಾಗಿ ಬಿಜೆಪಿ ಎದುರಿಸಲಾಗದೇ ಇಂತಹ ವಾಮಮಾರ್ಗವನ್ನು ಕಾಂಗ್ರೆಸ್ ಅನುಸರಿಸುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.
ಪ್ರಧಾನಿ ಸಿಂಗ್ ಅವರಿಗೆ ಜೇಟ್ಲಿ ಬರೆದಿರುವ ಪತ್ರದ ಕುರಿತು ಕಾಂಗ್ರೆಸ್ ಯಾವೊಬ್ಬ ನಾಯಕರು ಇದುವರೆಗೆ ಪ್ರತಿಕ್ರಿಯಿಸಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

