ರಶೀದ್ ಮಸೂದ್ಗೆ 4 ವರ್ಷ ಜೈಲು

ನವದೆಹಲಿ: ದೋಷಿ ಎಂದು ಪರಿಗಣಿಸಲ್ಪಟ್ಟ ಅಥವಾ ಜೈಲು ಸೇರಿದ ಶಾಸಕ, ಸಂಸದರನ್ನು ತಕ್ಷಣವೇ ಅನರ್ಹಗೊಳಿಸಬೇಕು ಎಂಬ ಸುಪ್ರೀಂ ಕೋರ್ಟ್ ತೀರ್ಪಿಗೆ ಕಾಂಗ್ರೆಸ್ ಸಂಸದ ರಶೀದ್ ಮಸೂದ್ ಮೊದಲ ಬಲಿಯಾಗಿದ್ದಾರೆ.
ಎಂಬಿಬಿಎಸ್ ಸೀಟು ಹಂಚಿಕೆ ಹಗರಣ ಸಂಬಂಧ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ರಶೀದ್ ಮಸೂದ್ಗೆ ನಾಲ್ಕು ವರ್ಷ ಜೈಲು ಶಿಕ್ಷೆಯಾಗಿದ್ದು, ತಕ್ಷಣದಿಂದಲೇ ಅವರ ರಾಜ್ಯಸಭಾ ಸದಸ್ಯತ್ವ ರದ್ದಾಗಲಿದೆ.
ಎಂಬಿಬಿಎಸ್ ಸೀಟು ಕೊಡಿಸುವಲ್ಲಿ ಅಕ್ರಮವೆಸಗಿದ್ದ ರಶೀದ್ ಮಸೂದ್ ದೋಷಿ ಎಂದು ಕಳೆದ ಸೆಪ್ಟೆಂಬರ್ 19ರಂದು ದೆಹಲಿ ಸಿಬಿಐ ವಿಶೇಷ ಕೋರ್ಟ್ ತೀರ್ಪು ನೀಡಿತ್ತು. ಅಲ್ಲದೆ ಶಿಕ್ಷೆಯ ಪ್ರಮಾಣವನ್ನು ಇಂದಿಗೆ ಕಾಯ್ದರಿಸಿತ್ತು. ಇಂದು ಶಿಕ್ಷೆ ಪ್ರಕಟಿಸಿದ ನ್ಯಾ. ಜೆ.ಪಿ.ಎಸ್ ಮಲಿಕ್ ಅವರು, ಮಸೂದ್ ಸೇರಿದಂತೆ ಮೂವರು ಅಪರಾಧಿಗಳಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿದರು. ಅಲ್ಲದೆ ದೇಶದಲ್ಲಿ ಯಾರೂ ಕಾನೂನಿಗಿಂತ ದೊಡ್ಡವರಲ್ಲ. ಕೋರ್ಟ್ ತೀರ್ಪು ಇದನ್ನು ಪುನರುಚ್ಚರಿಸುತ್ತದೆ ಎಂದು ಹೇಳಿದರು.
ಇದೇ ಪ್ರಕರಣ ಸಂಬಂಧ ಐಎಎಸ್ ಅಧಿಕಾರಿ ಎ.ಕೆ.ರಾಯ್ ಹಾಗೂ ಐಪಿಎಸ್ ಅಧಿಕಾರಿ ಗುರುದಯಾಳ್ ಸಿಂಗ್ ಅವರಿಗೂ ಕೋರ್ಟ್ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಕೋರ್ಟ್ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸುತ್ತಿದಂತೆ ಮಸೂದೆ ಸೇರಿದಂತೆ ಮೂವರು ಅಪರಾಧಿಗಳನ್ನು ಪೊಲೀಸ್ ವಶಕ್ಕೆ ತೆಗೆದುಕೊಳ್ಳಲಾಗಿದ್ದು, ಮಸೂದ್ ಅವರು ಜೈಲಿನಿಂದ ಬಿಡುಗಡೆಯಾದ ದಿನದಿಂದ 6 ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸುವಂತಿಲ್ಲ. ಹೀಗಾಗಿ ಅವರು 10 ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸುವ ಹಕ್ಕನ್ನು ಸಹ ಕಳೆದುಕೊಂಡಿದ್ದಾರೆ.
ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಅನರ್ಹಗೊಂಡಿರುವ ಮೊದಲ ಸಂಸದ ರಶೀದ್ ಮಸೂದ್ ಆಗಿದ್ದು, ಎರಡನೆಯವರು ಮೇವು ಹಗರಣದಲ್ಲಿ ತಪ್ಪಿತಸ್ಥರಾಗಿರುವ ಬಿಹಾರ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಮತ್ತು ಜೆಡಿಯುನ ಸಂಸದ ಜಗದೀಶ್ ಶರ್ಮಾ ಮೂರನೆಯವರಾಗಿದ್ದಾರೆ.
ಸೀಟು ಹಂಚಿಕೆಯಲ್ಲಿ ಭ್ರಷ್ಟಾಚಾರ: 1990-91ರ ವಿಪಿ ಸಿಂಗ್ ಸರ್ಕಾರದಲ್ಲಿ ಮಸೂದ್ ಅವರು ಆರೋಗ್ಯ ಸಚಿವರಾಗಿದ್ದರು. ಈ ವೇಳೆ ಅವರು ತ್ರಿಪುರದಲ್ಲಿನ ಮೆಡಿಕಲ್ ಕಾಲೇಜುಗಳಲ್ಲಿ ಅನರ್ಹ ವಿದ್ಯಾರ್ಥಿಗಳಿಗೆ ಎಂಬಿಬಿಎಸ್ ಸೀಟು ಕಲ್ಪಿಸಿಕೊಟ್ಟಿದ್ದರು. ಈ ಪ್ರಕರಣ ಸಂಬಂಧ ಅವರ ವಿರುದ್ಧ ದೂರ ದಾಖಲಾಗಿತ್ತು. ಸೆಪ್ಟೆಂಬರ್ 19ರಂದು ಪ್ರಕರಣದ ತೀರ್ಪು ನೀಡಿದ ವಿಶೇಷ ಸಿಬಿಐ ನ್ಯಾಯಾಧೀಶ ಜೆ.ಪಿ.ಎಸ್. ಮಲಿಕ್ ಅವರು ರಶೀದ್ ಮಸೂದ್ ಅವರನ್ನು ದೋಷಿ ಎಂದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


