ವಿವಾದಿತ ಸುಗ್ರೀವಾಜ್ಞೆ ಬಗ್ಗೆ ಮರು ಪರಿಶೀಲನೆ

ನವದೆಹಲಿ: ಕಳಂಕಿತ ಶಾಸಕ ಮತ್ತು ಸಂಸದರ ಸಾರ್ವಜನಿಕ ಹುದ್ದೆಯನ್ನು ಅಮಾನತುಗೊಳಿಸಬೇಕೆಂಬ ಸುಪ್ರೀಂ ಕೋರ್ಟ್ ತೀರ್ಪಿಗೆ ವಿರುದ್ಧವಾಗಿ ಕೇಂದ್ರ ಸರ್ಕಾರ ಹೊರಡಿಸಿದ್ದ ವಿವಾದಿತ ಸುಗ್ರೀವಾಜ್ಞೆಯನ್ನು ಕೇಂದ್ರದ ಯುಪಿಎ ಸರ್ಕಾರ ಮರು ಪರಿಶೀಲನೆ ಮಾಡುವ ಸಾಧ್ಯತೆ ಇದೆ.
ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಸುಗ್ರೀವಾಜ್ಞೆಯನ್ನು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು 'ಅಸಂಬದ್ಧವಾದ ನಡವಳಿಕೆ'(nonsense ordinance) ಎಂದು ಟೀಕಿಸಿದ್ದರು. ಇದರ ಬೆನ್ನಲ್ಲೇ ಪ್ರತಿಪಕ್ಷಗಳು ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದವು. ಈ ಹಿನ್ನಲೆಯಲ್ಲಿ ವಿವಾದಿತ ಸುಗ್ರೀವಾಜ್ಞೆಯ ಬಗ್ಗೆ ಕೇಂದ್ರ ಸರ್ಕಾರ ಮರು ಪರಿಶೀಲನೆ ನಡೆಸುವ ಸಾಧ್ಯತೆ ಇದೆ.
ಬುಧವಾರ ಬೆಳಗ್ಗೆ ಪ್ರಧಾನಿ ಮನಮೋಹನ್ ಸಿಂಗ್ ಅವರ ದೆಹಲಿ ನಿವಾಸದಲ್ಲಿ ಅಧಿಕಾರಿಗಳ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ. ಇದಕ್ಕೂ ಮೊದಲು ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಕೋರ್ ಕಮಿಟಿ ಸಭೆ ನಡೆಯಲಿದ್ದು, ಸಭೆಯಲ್ಲಿ ಸದಸ್ಯರ ಅಭಿಪ್ರಾಯ ಸಂಗ್ರಹಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿದುಬಂದಿದೆ.
ಪ್ರಸ್ತುತ ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ಮನಮೋಹನ ಸಿಂಗ್ ಅವರು ಇಂದು ರಾತ್ರಿ ಭಾರತಕ್ಕೆ ವಾಪಸಾಗಲಿದ್ದು, ನಾಳೆ ಬೆಳಗ್ಗೆ ನಡೆಯಲಿರುವ ಕಾಂಗ್ರೆಸ್ ಕೋರ್ ಕಮಿಟಿ ಸಭೆ ಮತ್ತು ಅಧಿಕಾರಿಗಳ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.
ವಿವಿಧ ಪ್ರಕರಣಗಳಲ್ಲಿ ಸಿಲುಕಿ 2ವರ್ಷಕ್ಕಿಂತ ಅಧಿಕ ಕಾಲ ಸೆರೆವಾಸದಲ್ಲಿದ್ದ ಪ್ರಜಾ ಪ್ರತಿನಿಧಿಗಳನ್ನು ಸಾರ್ವಜನಿಕ ಹುದ್ದೆಗಳಿಂದ ವಜಾಗೊಳಿಸಬೇಕು ಎಂಬ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಸೆಪ್ಟಂಬರ್ 24ರಂದು ಕೇಂದ್ರ ಸರ್ಕಾರ ಹೊಸ ಸುಗ್ರೀವಾಜ್ಞೆಯನ್ನು ಹೊರಡಿಸಿತ್ತು. ಪ್ರಸ್ತುತ ಸುಗ್ರೀವಾಜ್ಞೆಯನ್ನು ಪ್ರಣಬ್ ಮುಖರ್ಜಿ ಅವರ ಅಂಕಿತಕ್ಕಾಗಿ ರಾಷ್ಟ್ರಪತಿ ಭವನಕ್ಕೆ ಕಳುಹಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


