ಪಕ್ಷದಲ್ಲಿ ಯಾವುದೇ ಭಿನ್ನಮತವಿಲ್ಲ: ಕೇಜ್ರಿವಾಲ್ ಸ್ಪಷ್ಟನೆ

ನೂತನ ಸರ್ಕಾರದ ಸಂಭಾವಿತ ಸಚಿವರ ಪಟ್ಟಿಯಲ್ಲಿ ಸ್ಥಾನ ಸಿಗಲಿಲ್ಲ ಎನ್ನುವ ಕಾರಣಕ್ಕೆ ಆಮ್ ಆದ್ಮಿ ಪಕ್ಷ(ಆಪ್)ದ ಶಾಸಕ ವಿನೋದ್ ಕುಮಾರ್ ಬಿನ್ನಿ...

Published: 25th December 2013 02:00 AM  |   Last Updated: 25th December 2013 01:14 AM   |  A+A-


Posted By : Vishwanath
ನವದೆಹಲಿ: ನೂತನ ಸರ್ಕಾರದ ಸಂಭಾವಿತ ಸಚಿವರ ಪಟ್ಟಿಯಲ್ಲಿ ಸ್ಥಾನ ಸಿಗಲಿಲ್ಲ ಎನ್ನುವ ಕಾರಣಕ್ಕೆ ಆಮ್ ಆದ್ಮಿ ಪಕ್ಷ(ಆಪ್)ದ ಶಾಸಕ ವಿನೋದ್ ಕುಮಾರ್ ಬಿನ್ನಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಹಿನ್ನೆಲೆ, ಪಕ್ಷದಲ್ಲಿ ಯಾವುದೇ ರೀತಿಯ ಭಿನ್ನಮತವಿಲ್ಲ ಎಂದು ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಬುಧವಾರ ಹೇಳಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಕೇಜ್ರಿವಾಲ್, ಪಕ್ಷದಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳು ಇಲ್ಲ. ನಾವು ಒಂದಾಗಿಯೇ ಇದ್ದೇವೆ ಎಂದಿದ್ದಾರೆ. ಇದೇ ವೇಳೆ ಗುರುವಾರ ಪ್ರಮಾಣವಚನ ಸ್ವೀಕಾರ ಮಾಡುವ ಸಂಬಂಧ ಇಲ್ಲಿಯವರೆಗೆ ಉಪ ರಾಜ್ಯಪಾಲರಿಂದ ಯಾವುದೇ ಆಹ್ವಾನ ಬಂದಿಲ್ಲ. ಹೀಗಾಗಿ ನಾಳೆ ಪ್ರಮಾಣವಚನ ಸ್ವೀಕಾರ ಮಾಡುವ ಸಾಧ್ಯತೆ ಕಡಿಮೆ ಎಂದು ಹೇಳಿದ್ದಾರೆ.

ದೆಹಲಿ ಜನತೆ ನಮ್ಮ ಮೇಲೆ ಭರವಸೆ ಇಟ್ಟು ನಮ್ಮನ್ನು ಆಯ್ಕೆ ಮಾಡಿದ್ದಾರೆ. ಮತದಾರರಿಗೆ ನೀಡಿದ್ದ ಭರವಸೆಯನ್ನು ಈಡೇರಿಸಲು ನಾವು ಬದ್ದ. ಆದರೆ ಯಾವುದೇ ಕಾರಣಕ್ಕು ಮತ್ತೊಂದು ಪಕ್ಷದ ಜತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಏತನ್ಮಧ್ಯೆ, ಆಮ್ ಆದ್ಮಿ ಪಕ್ಷದ ಸರ್ಕಾರಕ್ಕೆ ಬೆಂಬಲ ನೀಡುವ ವಿಚಾರದಲ್ಲಿ ಕಾಂಗ್ರೆಸ್‌ನಲ್ಲೂ ಒಡಕು ಮೂಡಿದ್ದು, ಆಪ್‌ಗೆ ಬೆಂಬಲ ನೀಡುವ ವರಿಷ್ಠರ ಕ್ರಮದ ಕುರಿತು ಮಂಗಳವಾರ ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದರು. ಆಪ್‌ಗೆ ಬೆಂಬಲಿಸುವ ಬದಲು ಪತ್ರಿಪಕ್ಷ ಸ್ಥಾನದಲ್ಲಿ ಕೂರಬಹುದಿತ್ತು ಎಂದಿದ್ದರು.

ದೆಹಲಿ ಸರ್ಕಾರ ರಚನೆಗೆ ಸಂಬಂಧಿಸಿದಂತೆ ಆಪ್‌ನ ಸಂಭಾವಿತ ಸಚಿವರ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದೆ ಇದ್ದಿದ್ದರಿಂದ ಅಸಮಧಾನಗೊಂಡಿದ್ದ ಆಪ್ ಶಾಸಕ ವಿನೋದ್ ಕುಮಾರ್ ಬಿನ್ನಿ ಇಂದು ಭಾರಿ ರಹಸ್ಯವೊಂದನ್ನು ಸ್ಫೋಟಿಸುವುದಾಗಿ ಎಚ್ಚರಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಆಪ್ ಮುಖಂಡರು ತಕ್ಷಣ ಬಿನ್ನಿ ಅವರನ್ನು ಸಮಾಧಾನ ಪಡಿಸಲು ಮುಂದಾಗಿದ್ದರು. ಪಕ್ಷ ಬಿನ್ನಿ ಅವರನ್ನು ಕಡೆಗಣಿಸಿಲ್ಲ. ಅವರಿಗೆ ಸರ್ಕಾರದಲ್ಲಿ ದೊಡ್ಡ ಪಾತ್ರ ನೀಡಲಾಗುವುದು ಎಂದಿದ್ದರು.

Stay up to date on all the latest ಈಗಿನ ಸುದ್ದಿ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp