ಪರಮೇಶ್ವರ ಹೇಳಿಕೆ ನಾನ್ಸೆನ್ಸ್: ದೇವೇಗೌಡ

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರ ಹೇಳಿಕೆಗೆ ತೀಕ್ಷ್ಮಣವಾಗಿ ಪ್ರತಿಕ್ರಿಯಿಸಿರುವ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡ ಅವರು, ಪರಮೇಶ್ವರ ಹೇಳಿಕೆಯೇ ನಾನ್ಸೆನ್ಸ್ ಎಂದು ಕಿಡಿಕಾರಿದ್ದಾರೆ.
'ಚುನಾವಣೆಯಲ್ಲಿ ಗೆಲುವು ಸಾಧಿಸದಿದ್ದರೆ ವಿಷ ಕುಡಿಯುತ್ತೇನೆ ಎಂದು ದೇವೇಗೌಡರು ಹೇಳಿದ್ದರು.' ನಾನು ಸಹ ಅವರು ವಿಷ ಕುಡಿಯುವುದನ್ನೇ ಕಾಯುತ್ತಿದ್ದೇನೆ ಎಂದು ಇಂದು ಬೆಳಗ್ಗೆ ಪರಮೇಶ್ವರ್ ವ್ಯಂಗ್ಯವಾಡಿದ್ದರು. ಅಲ್ಲದೆ ದೇವೇಗೌಡರು ಮುಸ್ಲಿಂ ಮಾತದಾರರನ್ನು ಓಲೈಸಲು ತಾವು ಮುಂದಿನ ಜನ್ಮದಲ್ಲಿ ಮುಸ್ಲಿಂನಾಗಿ ಹುಟ್ಟಬೇಕು ಎಂದಿದ್ದರು. ಆದರೆ ಮುಂದಿನ ಜನ್ಮದಲ್ಲಿ ಏಕೆ? ತಾಕತ್ತಿದ್ದರೆ ಇದೇ ಜನ್ಮದಲ್ಲಿ ಮುಸ್ಲಿಂ ಧರ್ಮಕ್ಕೆ ಮತಾಂತರಗೊಳ್ಳಲಿ ಎಂದು ಪರಮೇಶ್ವರ ಸವಾಲು ಹಾಕಿದ್ದರು.
ಪರಮೇಶ್ವರ ಅವರ ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ದೇವೇಗೌಡರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೆಡಿಎಸ್ನಲ್ಲಿ ಇದ್ದಾಗಲೇ ನಾನು ಈ ಹೇಳಿಕೆ ನೀಡಿದ್ದೆ. ಈಗ ಹಳೆಯ ಹೇಳಿಕೆ ಕೆದಕುವುದು ಏಕೆ? ಎಂದು ಪ್ರಶ್ನಿಸಿದ್ದಾರೆ.
ದೇವೇಗೌಡರ ಬಗ್ಗೆ ಪರಮೇಶ್ವರಗೆ ಏನು ಗೊತ್ತು? ಒಂದು ರಾಷ್ಟ್ರೀಯ ಪಕ್ಷದ ರಾಜ್ಯಾಧ್ಯಕ್ಷರಾಗಿ ಒಬ್ಬ ಮಾಜಿ ಪ್ರಧಾನಿ ಬಗ್ಗೆ ಈ ರೀತಿ ಕೀಳುಮಟ್ಟದ ಹೇಳಿಕೆ ನೀಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. ಅಲ್ಲದೆ ಅವರು ಕೆಪಿಸಿಸಿ ಅಧ್ಯಕ್ಷರಾಗಲು ಸಹ ನಾಲಾಯಕ್ ಎಂದು ಗುಡುಗಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


