ಮೋದಿ ಅಲೆ ಕೃತಕ ಸೃಷ್ಟಿ: ಕೃಷ್ಣ

ಬೆಂಗಳೂರು: ದೇಶದಲ್ಲಿ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಅಲೆಯನ್ನು ಕೃತಕವಾಗಿ ಸೃಷ್ಟಿಸಲಾಗುತ್ತಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಬುಧವಾರ ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕೃಷ್ಣ, ಬಿಜೆಪಿ ಪ್ರಧಾನಿ ಅಭ್ಯರ್ಥಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ದೇಶದಲ್ಲಿ ಈಗ ಯಾವ ಅಲೆಯೂ ಇಲ್ಲ. 1971ರಲ್ಲಿ ಇಂದಿರಾ ಗಾಂಧಿ ಅವರ ಅಲೆ ಹಾಗೂ 1994ರಲ್ಲಿ ರಾಜೀವ್ ಗಾಂಧಿ ಅವರ ಅಲೆ ಇತ್ತು. ಆದರೆ ಈಗ ಮೋದಿ ಅಲೆಯನ್ನು ಕೃತಕವಾಗಿ ಸೃಷ್ಟಿಸಲಾಗುತ್ತಿದೆ ಎಂದರು.
ಬಿಜೆಪಿಯಲ್ಲಿ ಪ್ರಧಾನಿ ಕುರ್ಚಿಗಾಗಿ ಎಲ್.ಕೆ.ಆಡ್ವಾಣಿ, ಮುರಳಿ ಮನೋಹರ ಜೋಶಿ, ಮೋದಿ ಹಾಗೂ ಸುಷ್ಮಾ ಸ್ವರಾಜ್ ನಡುವೆ ಕಿತ್ತಾಟ ನಡೆದಿದೆ. ಅಲ್ಲದೆ ಎಲ್.ಕೆ. ಆಡ್ವಾಣಿ ಅವರಂತಹ ಹಿರಿಯ ನಾಯಕರನ್ನು ಕಡೆಗಣಿಸಲಾಗಿದ್ದು, ಇದು ಮೋದಿಯ ಸರ್ವಾಧಿಕಾರಿ ಧೊರಣೆಯನ್ನು ಎತ್ತಿತೊರಿಸುತ್ತದೆ ಎಂದರು.
ಬೆಂಗಳೂರಿನ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ನಂದನ್ ನಿಲೇಕಣಿ ಅವರಿಂದಾಗಿ ಬೆಂಗಳೂರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದೆ ಎಂದು ಕೃಷ್ಣ ಹೇಳಿದರು.
ಇದೇ ವೇಳೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರ ಸೋಲಿನ ಬಗ್ಗೆ ಪ್ರತಿಕ್ರಿಯಿಸಿದ ಕೃಷ್ಣ, ಪರಮೇಶ್ವರ ಅವರು ಚುನಾವಣೆ ವೇಳೆ ತಮ್ಮ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿರಲಿಲ್ಲ. ಹೀಗಾಗಿ ಅವರು ಸೋಲಬೇಕಾಯಿತು ಮತ್ತು ಈ ಹಿಂದೆಯೂ ಸಹ ಕೆಪಿಸಿಸಿ ಅಧ್ಯಕ್ಷರು ಸೋತಿದ್ದರು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


