ಈಗಿನ ಸುದ್ದಿ

ಹೊಗಳಿ ಇಕ್ಕಟ್ಟಿಗೆ ಸಿಲುಕಿದ ವರುಣ್

ಹೊಗಳಿ ಇಕ್ಕಟ್ಟಿಗೆ ಸಿಲುಕಿದ ವರುಣ್
Published On :

ಅಮೇಥಿ: ಬಿಜೆಪಿ ಮುಖಂಡ ವರುಣ್ ಗಾಂಧಿ ಅವರು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಹೊಗಳಿ ಇದೀಗ ಇಕ್ಕಟ್ಟಿಗೆ ಸಿಲುಕಿದ್ದಾರೆ.

ಇಂದು ಉತ್ತರ ಪ್ರದೇಶದ ಅಮೇಥಿಗೆ ಭೇಟಿ ನೀಡಿದ್ದ ವರುಣ್ ಗಾಂಧಿ ಅವರು, 'ನಾನು ಹೊಸ ಮಾದರಿ ರಾಜಕೀಯವನ್ನು ತರಲು ಇಚ್ಛಿಸಿದ್ದೇನೆ. ನಮಗೆ ಸಣ್ಣ ಕೈಗಾರಿಕೆಗಳ ಅವಶ್ಯಕತೆ ಇದ್ದು, ಇದರಿಂದ ಸ್ವಯಂ ಉದ್ಯೋಗಗಳು ಸೃಷ್ಟಿಯಾಗುತ್ತವೆ. ಈ ವಿಷಯದಲ್ಲಿ ರಾಹುಲ್ ಗಾಂಧಿ ಅವರು ಯಶಸ್ಸು ಸಾಧಿಸಿದ್ದಾರೆ. ತಮ್ಮ ಕ್ಷೇತ್ರ ಅಮೇಥಿಯಲ್ಲಿ ಇಂತಹ ಸಣ್ಣ ಕೈಗಾರಿಕೆಗಳಿಗೆ ಅವಕಾಶ ನೀಡುವ ಮೂಲಕ ಅವರು ನೂರಾರು ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಿದ್ದಾರೆ' ಎಂದು ಹೇಳಿದ್ದಾರೆ.

ವರುಣ್ ಗಾಂಧಿ ಅವರ ಭಿನ್ನ ಹೇಳಿಕೆಗಳಿಗೆ ಸ್ಥಳೀಯ ಬಿಜೆಪಿ ಮುಖಂಡರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ವರುಣ್ ಗಾಂಧಿ, ತಮ್ಮ ಹೇಳಿಕೆಗೆ ತೇಪೆ ಹಚ್ಚುವ ಕಾರ್ಯಕ್ಕೆ ಮುಂದಾಗಿದ್ದಾರೆ. ನಾನು ರಾಹುಲ್ ಗಾಂಧಿ ಅವರ ಕಾರ್ಯಗಳನ್ನು ವೈಯುಕ್ತಿಕವಾಗಿ ನೋಡಿಲ್ಲ. ಯಾರೊ ಹೇಳಿದ್ದನ್ನು ಇಲ್ಲಿ ಹೇಳಿದ್ದೇನೆ ಅಷ್ಟೇ ಎಂದು ಟ್ವಿಟರ್ನಲ್ಲಿ ಹೇಳಿದ್ದಾರೆ.

ವರುಣ್ ಗಾಂಧಿ ಅವರು ಹೇಳಿಕೆಗೆ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ ಅವರು, ವರುಣ್ ಮಾತುಗಳನ್ನು ನಾನು ಒಪ್ಪುತ್ತೇನೆ. ಅಮೇಥಿ ಮತ್ತು ನನ್ನ ನಡುವೆ ಉತ್ತಮ ಬಾಂಧವ್ಯವಿದೆ. ನನ್ನ ಉತ್ತಮ ಕಾರ್ಯಗಳು ಯಾರಿಗಾದರೂ ಇಷ್ಟವಾಗಿದ್ದರೆ, ನಾನು ಕೂಡ ಖುಷಿಪಡುತ್ತೇನೆ ಎಂದು ಹೇಳಿದ್ದಾರೆ.

ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ ಮಾಧ್ಯಮಗಳೊಂದಿಗೆ ಮಾತನಾಡಿದ್ದ ವರುಣ್ ಗಾಂಧಿ ಅವರು ಅಮೇಥಿಯಲ್ಲಿ ರಾಹುಲ್ ಗಾಂಧಿ ವಿರುದ್ಧವಾಗಿ ತಾವು ಪ್ರಚಾರ ಮಾಡುತ್ತೇನೆ ಎಂದು ಘೋಷಿಸಿದ್ದರು. ಇದೀಗ ತಮ್ಮ ಸಹೋದರನ ಪರವಾಗಿ ಪರೋಕ್ಷ ಪ್ರಚಾರ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.