ಭ್ರಷ್ಟಮುಕ್ತ ಭಾರತ ನಿರ್ಮಾಣ: ಪ್ರಣಾಳಿಕೆಯಲ್ಲಿ ಆಪ್ ಭರವಸೆ

ನವದೆಹಲಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, 'ಭ್ರಷ್ಟಮುಕ್ತ ಭಾರತ ನಿರ್ಮಾಣ' ಮಾಡುವ ಭರವಸೆ ನೀಡಿದೆ.
ಇಂದು ದೆಹಲಿ ಆಪ್ ಕಚೇರಿಯಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿದ ದೆಹಲಿ ಮಾಜಿ ಮುಖ್ಯಮಂತ್ರಿ ಹಾಗೂ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು, ಭಾರತದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಭ್ರಷ್ಟಮುಕ್ತ ಭಾರತ ನಿರ್ಮಾಣ ಮಾಡುವ ಅವಶ್ಯಕತೆ ಇದೆ ಎಂದು ಹೇಳಿದ್ದಾರೆ.
ಕೇಂದ್ರದಲ್ಲಿ ಆಪ್ ಅಧಿಕಾರಕ್ಕೆ ಬಂದರೆ ಜನಲೋಕ್ ಪಾಲ್ ಮಸೂದೆಯನ್ನು ಜಾರಿಗೆ ತರುತ್ತೇವೆ. ಲೋಕಪಾಲ್ ವ್ಯಾಪ್ತಿಗೆ ದೇಶದ ಪ್ರಧಾನಿಯಿಂದ ಹಿಡಿದು ಜವಾನನವರೆಗೂ ಒಳಪಡುವಂತೆ ಮಾಡುತ್ತೇವೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಆಪ್ ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಕೇಜ್ರಿವಾಲ್, ದೆಹಲಿಯಲ್ಲಿ ಆಪ್ 49 ದಿನಗಳ ಕಾಲ ಸರ್ಕಾರ ನಡೆಸಿತ್ತು. ಈ ಅವದಿಯಲ್ಲಿ ಭ್ರಷ್ಟಾಚಾರ ಕಡಿಮೆಯಾಗಿತ್ತು. ತಮ್ಮ ಅಧಿಕಾರವಧಿಯಲ್ಲಿ ಭ್ರಷ್ಟ ಅಧಿಕಾರಿಗಳು ಲಂಚವನ್ನು ತೆಗೆದುಕೊಳ್ಳಲು ಹಿಂಜರಿಯುತ್ತಿದ್ದರು. ಹೀಗಾಗಿ ಕೇಂದ್ರದಲ್ಲಿ ಅಂತಹ ಸರ್ಕಾರ ಅಧಿಕಾರಕ್ಕೆ ಬರುವ ಅವಶ್ಯಕತೆ ಇದೆ ಎಂದಿದ್ದಾರೆ.
ಕೇಂದ್ರದಲ್ಲಿ ಆಪ್ ಅಧಿಕಾರಕ್ಕೆ ಬಂದರೆ ಅಧಿಕಾರ ವಿಕೇಂದ್ರಿಕರಣಗೊಳಿಸುವ ಭರವಸೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


