ಪಾಕ್ ಮಾಜಿ ಅಧ್ಯಕ್ಷ ಮುಷರಫ್ ಹತ್ಯೆಗೆ ವಿಫಲ ಯತ್ನ

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಅಧ್ಯಕ್ಷ ಫರ್ವೇಜ್ ಮುಷರಫ್ ಅವರ ಹತ್ಯೆಗೆ ಉಗ್ರರು ವಿಫಲ ಯತ್ನ ನಡೆಸಿದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ಮುಷರಫ್ ತೆರಳುತ್ತಿದ್ದ ವಾಹನದ ಮೇಲೆ ಉಗ್ರರು ಬಾಂಬ್ ದಾಳಿ ಮಾಡಿದ್ದು, ಸ್ವಲ್ಪದರಲ್ಲೇ ಸೇನಾ ಆಡಳಿತಗಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮುಷರಫ್ ಅವರು ತಾವು ಚಿಕಿತ್ಸೆ ಪಡೆಯುತ್ತಿದ್ದ ಸೇನಾ ಆಸ್ಪತ್ರೆಯಿಂದ ತಮ್ಮ ಫಾರ್ಮ್‌ಹೌಸ್‌ಗೆ ಮರಳುತ್ತಿದ್ದ ವೇಳೆ ಉಗ್ರರು ಬಾಂಬ್ ಸ್ಫೋಟಿಸಿದ್ದಾರೆ. ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲ. ಆದರೆ ಈವರೆಗೂ ದಾಳಿಯ ಹೊಣೆಯನ್ನು ಯಾವುದೇ ಉಗ್ರ ಸಂಘಟನೆ ಹೊತ್ತುಕೊಂಡಿಲ್ಲ.
ಮುಷರಫ್ ತೆರಳುತ್ತಿದ್ದ ಮಾರ್ಗ ಮಧ್ಯೆ ಇದ್ದ ಬ್ರಿಡ್ಜ್‌ವೊಂದರ ಬಳಿ ಇದ್ದ ಪೈಪ್‌ಲೈನ್‌ನಲ್ಲಿ ಸುಮಾರು ನಾಲ್ಕು ಕೆಜೆಯಷ್ಟು ಸ್ಫೋಟಕವನ್ನು ತುಂಬಿಸಿ ಸ್ಫೋಟಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಲಿಯಾಖತ್ ನಿಯಾಝ್ ಅವರು ತಿಳಿಸಿದ್ದಾರೆ.
ಮುಷರಫ್ ಆಗಮಿಸುವ ಕೆಲವೇ ನಿಮಿಷಗಳ ಮುನ್ನ ಈ ಸ್ಫೋಟ ಸಂಭವಿಸಿದ್ದು, ಘಟನೆಯ ನಂತರ ಮುಷರಫ್ ಅವರು ಬೇರೆ ಮಾರ್ಗದ ಮೂಲಕ ಫಾರ್ಮ್‌ಹೌಸ್‌ಗೆ ತೆರಳಿದ್ದಾರೆ ಎಂದು ನಿಯಾಝ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


