ಈಗಿನ ಸುದ್ದಿ

ಕಾಂಗ್ರೆಸ್‌ಗೆ ಬೆಂಬಲ ಸೂಚಿಸಿದ ಬುಖಾರಿ

ಕಾಂಗ್ರೆಸ್‌ಗೆ ಬೆಂಬಲ ಸೂಚಿಸಿದ ಬುಖಾರಿ
Published On :

ನವದೆಹಲಿ: ಮುಂದಿನ ವಾರ ಲೋಕಸಭೆಗೆ ಮತದಾನ ಪ್ರಕ್ರಿಯೆ ಆರಂಭವಾಗುತ್ತಿದ್ದು, ಜಾಮಾ ಮಸೀದಿ ಶಾಹಿ ಇಮಾಮ ಮುಖ್ಯಸ್ಥ ಸೈಯದ್ ಅಹಮದ್ ಬುಖಾರಿ ಶುಕ್ರವಾರ ಕಾಂಗ್ರೆಸ್‌ಗೆ ತಮ್ಮ ಬೆಂಬಲ ಸೂಚಿಸಿದ್ದಾರೆ.

ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಸ್ಲಿಂರ ಕಲ್ಯಾಣಕ್ಕಾಗಿ ಕಾಂಗ್ರೆಸ್ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ್ನು ಬೆಂಬಲಿಸಲಾಗುವುದು ಎಂದರು.

ಅಲ್ಲದೆ ಯಾವುದೇ ಕಾರಣಕ್ಕೂ ಉತ್ತರಪ್ರದೇಶದಲ್ಲಿ ಸಮಾಜವಾದಿ ಮತ್ತು ಬಹುಜನ ಸಮಾಜವಾದಿ ಪಕ್ಷಗಳನ್ನು ಬೆಂಬಲಿಸುವುದಿಲ್ಲ ಎಂದ ಅವರು, ಬಿಹಾರದಲ್ಲಿ ಆರ್‌ಜೆಡಿ ಹಾಗು ಪಶ್ಚಿಮ ಬಂಗಾಳದಲ್ಲಿ ಆಡಳಿಯಾರೂಢ ತೃಣಮೂಲ ಕಾಂಗ್ರೆಸ್‌ ಅನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ.

ಕೆಲ ಕೋಮುವಾದಿಗಳಿಂದ ಮತ ವಿಭಜನೆ ಯತ್ಮ ನಡೆಯುತ್ತಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜಾತ್ಯತೀತ ಶಕ್ತಿಗಳು ಒಗ್ಗೂಡಬೇಕು. ಹಾಗೂ ಪ್ರಜ್ಞಾಪೂರ್ವಕವಾಗಿ ಮತ ಚಲಾಯಿಸಬೇಕಿದೆ ಎಂದರು.

ಎರಡು ದಿನಗಳ ಹಿಂದೆ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು  ಸಯ್ಯದ್‌ ಅಹ್ಮದ್‌ ಬುಖಾರಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.