ಈಗಿನ ಸುದ್ದಿ

ಯುಪಿಎ ವಿರುದ್ಧ ಬಿಜೆಪಿ 2ನೇ ಜಾರ್ಜ್ ಶೀಟ್

ಯುಪಿಎ ವಿರುದ್ಧ ಬಿಜೆಪಿ 2ನೇ ಜಾರ್ಜ್ ಶೀಟ್
Published On :

ನವದೆಹಲಿ: ಯುಪಿಎ ಸರ್ಕಾರದ ವೈಫಲ್ಯಗಳನ್ನು ಬಿಂಬಿಸಲು ಮುಂದಾಗಿರುವ ಬಿಜೆಪಿ, ಇದಕ್ಕಾಗಿ 50 ಅಂಶಗಳನ್ನೋಳಗೊಂಡ 2ನೇ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಒಂದು ಪಕ್ಷ ಮತ್ತೊಂದು ಪಕ್ಷದ ಮೇಲೆ ಆರೋಪಗಳನ್ನು ಮಾಡುವುದು ಸರ್ವೇ ಸಾಮಾನ್ಯ. ಇದಕ್ಕೆ ಮತ್ತೊಂದು ಸೇರ್ಪಡೆಯೊಂದರೆ ಬಿಜೆಪಿ, ಯುಪಿಎ ಸರ್ಕಾರದ ಅವಧಿಯಲ್ಲಿನ ವೈಫಲ್ಯಗಳನ್ನು ಎತ್ತಿ ತೋರಿಸುವ 50 ಅಂಶಗಳನ್ನೋಳಗೊಂಡ 2ನೇ ಜಾರ್ಜ್‌ಶೀಟ್ ಬಿಡುಗಡೆ ಮಾಡಿದೆ.

ಇಂದು ದೆಹಲಿ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಯುಪಿಎ ಸರ್ಕಾರದ ವೈಫಲ್ಯದ 2ನೇ ಪಟ್ಟಿಯನ್ನು ಬಿಜೆಪಿ ಮುಖಂಡ ರವಿಶಂಕರ್ ಪ್ರಸಾದ್ ಬಿಡುಗಡೆ ಮಾಡಿದರು. ಆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರು. ಯುಪಿಎ ಸರ್ಕಾರದ ಕಾಲಾವಧಿಯಲ್ಲಿ ನಡೆದ ಹಣಕಾಸಿನ ಹಗರಣಗಳಿಂದ ಕಾಂಗ್ರೆಸ್ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದರು.

ಬಿಜೆಪಿ ಜಾರ್ಜ್‌ಶೀಟ್‌ನ ಪ್ರಮುಖ ಅಂಶಗಳು:
ಯುಪಿಎ ಅವಧಿಯಲ್ಲಿ ದೇಶದಲ್ಲಿ ಆರ್ಥಿಕ ಸಂಕಷ್ಟ.
ಯುಪಿಎ ಸರ್ಕಾರ ಪ್ರಧಾನಿಯನ್ನು ಕೈಗೊಂಬೆ ಮಾಡಿಕೊಂಡಿದೆ.
ಯುಪಿಎ ಸರ್ಕಾರ ಅವಧಿಯಲ್ಲಿ ದೇಶದಲ್ಲಿ ಭ್ರಷ್ಟಾಚಾರ ಪ್ರಮಾಣ ಹೆಚ್ಚಳ.
ಗಡಿ ಸಮಸ್ಯೆ ಇತ್ಯರ್ಥಗೊಳಿಸುವಲ್ಲಿ ಯುಪಿಎ ವಿಫಲ
ಬೆಲೆ ಏರಿಕೆ ತಡೆಗೆ ಸೂಕ್ತ ಕ್ರಮಕೈಗೊಳ್ಳುವಲ್ಲಿ ಯುಪಿಎ ವಿಫಲ


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.