ಈಗಿನ ಸುದ್ದಿ

ಮಾಜಿ ಸಿಎಂ ಕೇಜ್ರಿವಾಲ್‌ಗೆ ಕಪಾಳಮೋಕ್ಷ

ಮಾಜಿ ಸಿಎಂ ಕೇಜ್ರಿವಾಲ್‌ಗೆ ಕಪಾಳಮೋಕ್ಷ
Published On :

ನವದೆಹಲಿ: ದೆಹಲಿಯ ದಕ್ಷಿಣಪುರಿಯಲ್ಲಿ ಎಎಪಿ ಪ್ರಚಾರದಲ್ಲಿ ತೊಡಗಿದ್ದ ದೆಹಲಿ ಮಾಜಿ ಮುಖ್ಯಮಂತ್ರಿ ಹಾಗೂ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್‌ಗೆ ಅಪರಿಚಿತ ವ್ಯಕ್ತಿಯೋರ್ವ ಕಪಾಳಮೋಕ್ಷ ಮಾಡಿದ್ದಾನೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಎಪಿ ಪರ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿರುವ ಕೇಜ್ರಿವಾಲ್ ಇಂದು ದಕ್ಷಿಣ ಪುರಿಯಲ್ಲಿ ರೋಡ್ ಷೋ ನಡೆಸುತ್ತಿದ್ದ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿಯೋರ್ವ ಏಕಾಏಕಿ ಕೇಜ್ರಿವಾಲ್‌ಗೆ ಕಪಾಳಮೋಕ್ಷ ಮಾಡಿದ್ದಾನೆ. ಇದರಿಂದ ಉದ್ರಿಕ್ತಗೊಂಡ ಎಎಪಿ ಕಾರ್ಯಕರ್ತರು ವ್ಯಕ್ತಿಯನ್ನು ಹಿಗ್ಗಾಮುಗ್ಗ ಥಳಿಸಿದ್ದಾರೆ. ಕೇಜ್ರಿವಾಲ್‌ಗೆ ಕಪಾಳಮೋಕ್ಷ ಮಾಡಿದ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಇದಕ್ಕೂ ಮುನ್ನ ಹರಿಯಾಣದಲ್ಲಿ ಪ್ರಚಾರದಲ್ಲಿ ತೊಡಗಿದ್ದ ಕೇಜ್ರಿವಾಲ್‌ರ ಮೇಲೆ ವ್ಯಕ್ತಿಯೋರ್ವ ಹಲ್ಲೆಗೆ ಮುಂದಾಗಿದ್ದು, ಆತ ಕೇಜ್ರಿವಾಲ್‌ರ ಬೆನ್ನಿಗೆ ಹೊಡೆದಿದ್ದ ಘಟನೆ ವರದಿಯಾಗಿತ್ತು. ಕಳೆದ ತಿಂಗಳು ವಾರಣಾಸಿಯಿಂದ ಬಿಜೆಪಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸುಲು ಜನಮತ ಸಂಗ್ರಹಣೆಗಾಗಿ ತೆರಳಿದ್ದ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿಯೋರ್ವ ಕೇಜ್ರಿವಾಲ್ ಮೇಲೆ ಇಂಕ್ ಎರಚಿದ ಘಟನೆ ವರದಿಯಾಗಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಜ್ರಿವಾಲ್, ನಮ್ಮನ್ನು ಯಾರಾದರೂ ಕೊಂದರು ಸಹ ನಾವು ಅದಕ್ಕೆ ಪ್ರತಿಕಾರ ತೀರಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.