ಈಗಿನ ಸುದ್ದಿ

ಕೈ ಕಾರ್ಯಕರ್ತರ ನಡುವೆ ಘರ್ಷಣೆ, ರಮ್ಯಾ ರೋಡ್ ಶೋ ಅರ್ಧಕ್ಕೆ ಮೊಟಕು

ಕೈ ಕಾರ್ಯಕರ್ತರ ನಡುವೆ ಘರ್ಷಣೆ, ರಮ್ಯಾ ರೋಡ್ ಶೋ ಅರ್ಧಕ್ಕೆ ಮೊಟಕು
Published On :

ಮಂಡ್ಯ: ಮಂಡ್ಯ ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಪೂನಃ ಸಾಬೀತಾಗಿದೆ. ಶನಿವಾರ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೈ ಕೈ ಮೀಲಾಯಿಸಿರುವ ಘಟನೆ ನಡೆದಿದೆ.

ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಮ್ಯಾ ಅವರು ಇಂದು ರೋಡ್ ಶೋ ನಡೆಸುತ್ತಿದ್ದ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆಸಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಕೈ ಕಾರ್ಯಕರ್ತರು ಕೈ ಕೈ ಮೀಲಾಯಿಸಿದ್ದಾರೆ. ಇದರಿಂದಾಗಿ ಬೇಸರಗೊಂಡ ರಮ್ಯಾ ಅವರು ರೋಡ್ ಶೋವನ್ನು ಅರ್ಧಕ್ಕೆ ಮೊಟಕುಗೊಳಿಸಿದರು.

ರಮ್ಯಾ ಅವರು ಬೇಲೂರು ಗ್ರಾಮದಲ್ಲಿ ರೋಡ್‌ ಶೋ  ನಡೆಸುತ್ತಿದ್ದ ವೇಳೆ ಲಿಂಗರಾಜು ಹಾಗೂ  ರವೀಂದ್ರ ಶ್ರೀಕಂಠಯ್ಯ ಬೆಂಬಲಿಗರ ನಡುವೆ ರೋಡ್‌ ಶೋ ವಾಹನವೇರುವ ವಿಷಯದಲ್ಲಿ ಜಗಳ ಸಂಭವಿಸಿ ಘರ್ಷಣೆಗೆ ತಿರುಗಿತು.

ಘರ್ಷಣೆ ನಡೆಯುತ್ತಿದ್ದ ವೇಳೆ ಕಾಂಗ್ರೆಸ್‌ ಕಾರ್ಯಕರ್ತ ಶ್ರೀನಿವಾಸ್‌ ಎನ್ನುವವರ ಮೇಲೆ ರೋಡ್‌ ಶೋ ನಡೆಸುತ್ತಿದ್ದ ವಾಹನ ಹರಿದು ಕಾಲು ಮುರಿತಕ್ಕೊಳಗಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.