ಈಗಿನ ಸುದ್ದಿ

ಕೇಜ್ರಿ ಎಫ್‌ಐಆರ್ ಕಾನೂನು ಬಾಹಿರ

ಕೇಜ್ರಿ ಎಫ್‌ಐಆರ್ ಕಾನೂನು ಬಾಹಿರ
Published On :

ನವದೆಹಲಿ: ಪೆಟ್ರೋಲಿಯಂ ಸಚಿವ ವೀರಪ್ಪ ಮೊಯ್ಲಿ, ರಿಲಯನ್ಸ್ ಇಂಡಸ್ಟ್ರೀಸ್‌ನ ಮುಖ್ಯಸ್ಥ ಮುಖೇಶ್ ಅಂಬಾನಿ ಮತ್ತು ಮಾಜಿ ಸಚಿವ ಮುರಳಿ ದಿಯೋರಾ ಅವರ ವಿರುದ್ಧ ದೆಹಲಿ ಸರ್ಕಾರ ದಾಖಲಿಸಿದ್ದ ಎಫ್‌ಐಆರ್ ಕಾನೂನು ಬಾಹಿರ ಎಂದು ಸಾಲಿಸಿಟರ್ ಜನರಲ್ ಮೋಹನ್ ಪರಿಸರನ್ ಅವರು ಹೇಳಿದ್ದಾರೆ.

ನವದೆಹಲಿಯಲ್ಲಿ ಮಾತನಾಡಿದ ಮೋಹನ್ ಪರಿಸರನ್ ಅವರು, ದೆಹಲಿ ಸರ್ಕಾರದ ನಿಲುವು ಕಾನೂನು ಬಾಹಿರ. ಸಂವಿಧಾನದಲ್ಲಿ ಇದಕ್ಕೆ ಆಸ್ಪದವಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ ಸರ್ಕಾರಗಳ ಇಂತಹ ನಡವಳಿಕೆ ಭಾರತ ದೇಶದ ಸಂವಿಧಾನ ವ್ಯವಸ್ಥೆಗೆ ಮಾರಕ ಎಂದು ಅವರು ಹೇಳಿದ್ದಾರೆ.

ಗ್ಯಾಸ್ ದರ ಏರಿಕೆಯಲ್ಲಿ ಪೆಟ್ರೋಲಿಯಂ ಸಚಿವ ವೀರಪ್ಪ ಮೊಯ್ಲಿ ಮತ್ತು ಮಾಜಿ ಪೆಟ್ರೋಲಿಯಂ ಸಚಿವ ಮುರಳಿ ದಿಯೋರಾ ಅವರು ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಖೇಶ್ ಅಂಬಾನಿ ಅವರೊಂದಿಗೆ ಕೈ ಜೋಡಿಸಿದ್ದಾರೆ ಎಂದು ಅಂದಿನ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಆರೋಪಿಸಿದ್ದರು. ಅಲ್ಲದೆ ತಮ್ಮ ದೆಹಲಿ ಸರ್ಕಾರದ ಭ್ರಷ್ಟಾಚಾರ ನಿಯಂತ್ರಣ ವಿಭಾಗದ ಮೂಲಕ ಈ ಮೂವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದರು.

ಆದರೆ ಇದೀಗ ಸಾಲಿಸಿಟರ್ ಜನರಲ್ ಮೋಹನ್ ಪರಸರನ್ ಅವರು ಕೇಜ್ರಿವಾಲ್ ಸರ್ಕಾರದ ನಿರ್ಧಾರ ಕಾನೂನು ಬಾಹಿರ ಎಂದು ಹೇಳಿದ್ದು, ಅರವಿಂದ್ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷಕ್ಕೆ ತೀವ್ರ ಹಿನ್ನಡೆಯಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.