ಈಗಿನ ಸುದ್ದಿ

ಅಮಿತ್ ಶಾ ವಿರುದ್ಧ ಎಫ್‌ಐಆರ್

ಅಮಿತ್ ಶಾ ವಿರುದ್ಧ ಎಫ್‌ಐಆರ್
Published On :

ಲಖನೌ: ಪ್ರಚೋದನಕಾರಿ ಭಾಷಣ ಮಾಡಿದ್ದ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಆಪ್ತ ಮತ್ತು ಗುಜರಾತ್ ಮಾಜಿ ಸಚಿವ ಅಮಿತ್ ಶಾ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದ ಅಮಿತ್ ಶಾ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಐಪಿಸಿ ಸೆಕ್ಷನ್ 153(ಎ) ಮತ್ತು 125ರ ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಈ ಹಿಂದೆ ಬಿಜ್ನೋರ್ ದಲ್ಲಿ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅಮಿತ್ ಶಾ ಅವರು, ಗಲಭೆಯಲ್ಲಿ ಹಾನಿಗೊಳಗಾದ ಜಾತ್ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ ಅವರು, ಮನುಷ್ಯ ಆಹಾರ ಮತ್ತು ನಿದ್ರೆ ಇಲ್ಲದಿದ್ದರೂ ಬದುಕ ಬಲ್ಲ. ಆದರೆ ತನಗಾದ ಅವಮಾನವನ್ನು ಸಹಿಸಿಕೊಂಡು ಆತ ಬದುಕಲಾರ. ಅವಮಾನಕ್ಕೆ ಪ್ರತೀಕಾರ ಪಡೆಯುವ ಕಾಲ ಸನ್ನಿಹಿತವಾಗಿದೆ. ರಾಜ್ಯದ ಜನತೆಗೆ ಮುಲಾಯಂ ಮತ್ತು ಅಖಿಲೇಶ್ ಸರ್ಕಾರದ ವಿರುದ್ಧ ಸೇಡುತೀರಿಸಿಕೊಳ್ಳುವಂತಿದ್ದರೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ ನೀಡುವಂತೆ ಅಮಿತ್ ಶಾ ಮನವಿ ಮಾಡಿದ್ದರು.

ಅಮಿತ್ ಶಾ ಅವರು ಈ ಹೇಳಿಕೆಯನ್ನು ಖಂಡಿಸಿ ಕಾಂಗ್ರೆಸ್, ಸಮಾಜವಾದಿ ಪಕ್ಷ ಸೇರಿದಂತೆ ಹಲವು ಪಕ್ಷಗಳ ಮುಖಂಡರು ಕಿಡಿಕಾರಿದ್ದರು. ಅಲ್ಲದೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗೆ ಕೇಂದ್ರ ಚುನಾವಣಾ ಆಯೋಗ ಕೂಡ ಅಮಿತ್ ಶಾ ವಿರುದ್ಧ ವಿಚಾರಣೆಗೆ ಮುಂದಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.