ಕೈ ಕಾರ್ಯಕರ್ತರ ಜಗಳ ಬೇಸರ ತಂದಿದೆ: ರಮ್ಯಾ

ಮಂಡ್ಯ: ಕೈ ಕಾರ್ಯಕರ್ತರ ಘರ್ಷಣೆಗೆ ಬೇಸರ ವ್ಯಕ್ತಪಡಿಸಿರುವ ಸಂಸದೆ ರಮ್ಯಾ, ಇನ್ನು ಮುಂದೆ ಹೀಗೆ ನಡೆಯುವುದಿಲ್ಲ. ಎಲ್ಲರು ಒಟ್ಟಾಗಿ ಸೇರಿ ಚುನಾವಣೆ ಎದುರಿಸುತ್ತೇವೆ ಎಂದು ಭಾನುವಾರ ಹೇಳಿದ್ದಾರೆ.
ಇಂದು ಕೆಆರ್‌ಎಸ್‌ನಲ್ಲಿ ಕಾಂಗ್ರೆಸ್ ರೋಡ್ ಶೋ ನಡೆಸುತ್ತಿರುವ ಅವರು, ಸುದ್ದಿಗಾರರೊಂದಿಗೆ ಮಾತನಾಡಿ ನಿನ್ನೆ ನಡೆದ ಘಟನೆಯಿಂದ ನನಗೆ ಬೇಸರವಾಗಿದೆ. ಆದರೆ ಇನ್ನು ಮುಂದೆ ಹೀಗೆ ನಡೆಯುದಿಲ್ಲ. ಎಲ್ಲರು ಒಟ್ಟಾಗಿ ಸೇರಿ ಚುನಾವಣೆ ಎದುರಿಸುವ ವಿಶ್ವಾಸ ನನಗಿದೆ ಎಂದರು. ಇಂದಿನ ಪ್ರಚಾರದಲ್ಲಿ ವಸತಿ ಸಚಿವ ಅಂಬರೀಷ್ ಅವರ ಬೆಂಬಲಿಗರು ಗೈರಾಗಿದ್ದು, ಲಿಂಗರಾಜು ಅವರ ಜತೆ ಸೇರಿ ಮತ್ತೊಂದು ದಿನ ಪ್ರಚಾರ ಮಾಡುವುದಾಗಿ ಹೇಳಿದರು.
ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ರಮ್ಯಾ ಅವರು ಜಿಲ್ಲೆಯಾದ್ಯಂತ ಪ್ರಚಾರ ನಡೆಸುತ್ತಿದ್ದು, ನಿನ್ನೆ ಬೇಲೂರು ಗ್ರಾಮದಲ್ಲಿ ನಡೆದ ರೋಡ್ ಶೋ ವೇಳೆ ಎರಡು ಬಣಗಳಾದ ಲಿಂಗರಾಜು ಹಾಗೂ ರವೀಂದ್ರ ಶ್ರೀಕಂಠಯ್ಯ ಬೆಂಬಲಿಗರ ನಡುವೆ ರೋಡ್ ಶೋ ವಾಹನವೇರುವ ವಿಷಯದಲ್ಲಿ ಜಗಳ ಸಂಭವಿಸಿ ಘರ್ಷಣೆ ಕಾರಣವಾಯಿತು. ಇದರಿಂದಾಗಿ ಬೇಸರಗೊಂಡು ರಮ್ಯಾ ರೋಡ್ ಶೋವನ್ನು ಅರ್ಧಕ್ಕೆ ಮುಟುಕುಗೊಳಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


